ಭಾರತ ನಿರ್ಮಿತ ಅಗ್ನಿ-5 ಕ್ಷಿಪಣಿ 'ಮಿಷನ್ ದಿವ್ಯಾಸ್ತ್ರ' ಮೊದಲ ಪ್ರಾಯೋಗಿಕ ಪರೀಕ್ಷೆ ಯಶಸ್ವಿ : ಪ್ರಧಾನಿ ಮೋದಿ

ಭಾರತ ನಿರ್ಮಿತ ಅಗ್ನಿ-5 ಕ್ಷಿಪಣಿ  'ಮಿಷನ್ ದಿವ್ಯಾಸ್ತ್ರ' ಮೊದಲ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ ಎಂದು ಘೋಷಣೆ ಮಾಡಿದ್ದಾರೆ. 

Written by - Zee Kannada News Desk | Last Updated : Mar 11, 2024, 08:57 PM IST
  • ಭಾರತ ನಿರ್ಮಿತ ಅಗ್ನಿ-5 ಕ್ಷಿಪಣಿ 'ಮಿಷನ್ ದಿವ್ಯಾಸ್ತ್ರ' ಮೊದಲ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ ಎಂದು ಘೋಷಣೆ ಮಾಡಿದ್ದಾರೆ.
  • ಸೋಮವಾರ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದ ಮೂಲಕ ಈ ಘೋಷಣೆಯನ್ನು ಮಾಡಿದ್ದಾರೆ
  • ಈ ಅಸಾಧಾರಣ ಯಶಸ್ಸಿಗೆ ವಿಜ್ಞಾನಿಗಳು ಮತ್ತು ಇಡೀ ತಂಡ. ಅವರ ಬಗ್ಗೆ ಭಾರತ ಹೆಮ್ಮೆಪಡುತ್ತದೆ' ಎಂದು ಹೇಳಿದ್ದಾರೆ.
ಭಾರತ ನಿರ್ಮಿತ ಅಗ್ನಿ-5 ಕ್ಷಿಪಣಿ 'ಮಿಷನ್ ದಿವ್ಯಾಸ್ತ್ರ'  ಮೊದಲ ಪ್ರಾಯೋಗಿಕ ಪರೀಕ್ಷೆ ಯಶಸ್ವಿ : ಪ್ರಧಾನಿ ಮೋದಿ title=

Mission Divyastra :  ದೇಶದ ರಕ್ಷಣಾ ವಲಯದ ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ 'ಮಿಷನ್ ದಿವ್ಯಾಸ್ತ್ರ' ಪ್ರಯೋಗ ಯಶಸ್ವಿಯಾಗಿದೆ ಎಂದು ಘೋಷಣೆ ಮಾಡಿದ್ದು, ರಕ್ಷಣಾ ಸಚಿವರು ಸೇರಿದಂತೆ ಹಲವಾರು ಗಣ್ಯರು ಡಿಆರ್‌ಡಿಓಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದ ಮೂಲಕ ಈ ಘೋಷಣೆಯನ್ನು ಮಾಡಿದ್ದಾರೆ. ಡಿಆರ್‌ಡಿಓ ಅಭಿವೃದ್ಧಿಗೊಳಿಸಿರುವ ಭಾರತ ನಿರ್ಮಿತ ಅಗ್ನಿ-5 ಕ್ಷಿಪಣಿ 'ಮಿಷನ್ ದಿವ್ಯಾಸ್ತ್ರ' ಮೊದಲ ಪ್ರಾಯೋಗಿಕ ಪರೀಕ್ಷೆಯನ್ನು ಘೋಷಿಸಿದರು. ಬಹು ಸ್ವತಂತ್ರ ಗುರಿಯ ಮರು-ಪ್ರವೇಶ ವಾಹನ (Multiple Independently Targetable Re-entry Vehicle MIRV) ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಈ ಕ್ಷಿಪಣಿ ಅಭಿವೃದ್ಧಿಗೊಳಿಸಲಾಗಿದೆ ಎಂದು ಮೋದಿ ಹೇಳಿದರು.

ಇದನ್ನು ಓದಿ : Job Fraud Alert: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ!

'ಮಿಷನ್ ದಿವ್ಯಾಸ್ತ್ರ' ಭಾರತೀಯ ರಕ್ಷಣಾ ವಲಯದಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಲಾಗಿದೆ. ಈ ಯೋಜನೆಯ ನಿರ್ದೇಶಕರು ಓರ್ವ ಮಹಿಳೆ ಎಂಬುದು ಮತ್ತೊಂದು ವಿಶೇಷವಾಗಿದೆ. ಸೋಮವಾರ ಭಾರತ ಈ ಪರೀಕ್ಷೆಯನ್ನು ನಡೆಸುವ ಮೂಲಕ ಎಂಐಆರ್‌ವಿ ತಂತ್ರಜ್ಞಾನವನ್ನು ಹೊಂದಿರುವ ವಿಶ್ವದ ಕೆಲವೇ ದೇಶಗಳ ಪಟ್ಟಿಗೆ ಸೇರ್ಪಡೆಗೊಂಡಿದ್ದು, ರಕ್ಷಣಾ ವಲಯದ ಪಾಲಿಗೆ ಮಹತ್ವದ ದಿನವಾಗಿದೆ. 

ಮೋದಿ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, 'ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಗಾಗಿ ನಮ್ಮ ಡಿಆರ್‌ಡಿಓ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ" ಎಂದು ಹೇಳಿದ್ದಾರೆ.

ಇದನ್ನು ಓದಿ : Vande Bharat Express : ವಂದೇ ಭಾರತ್ ಸ್ಲೀಪರ್ ರೈಲು, ನಿರ್ವಹಣಾ ವಿಶೇಷ ಕೇಂದ್ರ  ಸ್ಥಾಪನೆಗೆ 270 ಕೋಟಿ ಮಂಜೂರು 

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೋಸ್ಟ್ ಹಾಕಿ, 'ಎಂಐಆರ್‌ವಿ ತಂತ್ರಜ್ಞಾನದೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆ ಮಿಷನ್ ದಿವ್ಯಾಸ್ತ್ರವನ್ನು ಭಾರತ ಇಂದು ಯಶಸ್ವಿಯಾಗಿ ಪರೀಕ್ಷಿಸಿದೆ ಮತ್ತು ಈ ಸಾಮರ್ಥ್ಯವನ್ನು ಹೊಂದಿರುವ ಆಯ್ದ ರಾಷ್ಟ್ರಗಳ ಗುಂಪಿಗೆ ಸೇರಿದೆ. ಡಿಆರ್‌ಡಿಓಗೆ ಅಭಿನಂದನೆಗಳು. ಈ ಅಸಾಧಾರಣ ಯಶಸ್ಸಿಗೆ ವಿಜ್ಞಾನಿಗಳು ಮತ್ತು ಇಡೀ ತಂಡ. ಅವರ ಬಗ್ಗೆ ಭಾರತ ಹೆಮ್ಮೆಪಡುತ್ತದೆ' ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News