ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಐವರು ಸೈನಿಕರು ಹುತಾತ್ಮ
ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಂಡಿ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರು ಸ್ಫೋಟಕವನ್ನು ಪ್ರಚೋದಿಸಿದ ನಂತರ ಐವರು ಸೇನಾ ಯೋಧರು ಸಾವನ್ನಪ್ಪಿದ್ದಾರೆ ಮತ್ತು ಅಧಿಕಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ನವದೆಹಲಿ: ಶುಕ್ರವಾರದಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಕಂಡಿ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರು ಸ್ಫೋಟಕವನ್ನು ಪ್ರಚೋದಿಸಿದ ನಂತರ ಐವರು ಸೇನಾ ಯೋಧರು ಸಾವನ್ನಪ್ಪಿದ್ದಾರೆ ಮತ್ತು ಅಧಿಕಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ರಾಯಚೂರಲ್ಲಿ ಬೃಹತ್ ರೋಡ್ ಶೋ ಮೂಲಕ ಜೆ.ಪಿ.ನಡ್ಡಾ ಮತಬೇಟೆ
ಕಾರ್ಯಾಚರಣೆ ವೇಳೆ ಇಬ್ಬರು ಸೇನಾ ಯೋಧರು ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೂವರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಸದ್ಯಕ್ಕೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಇಡೀ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಮತ್ತು ಎಡಿಜಿಪಿ ಜಮ್ಮು ಮುಖೇಶ್ ಸಿಂಗ್ ಕೂಡ ಎನ್‌ಕೌಂಟರ್ ನಡೆಯುತ್ತಿರುವ ರಾಜೌರಿಯ ಕಂಡಿ ಪ್ರದೇಶವನ್ನು ತಲುಪಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
'