ಕಾಶ್ಮೀರದಲ್ಲಿ ಟ್ರಕ್ ಗೆ ಬೆಂಕಿ ಹತ್ತಿ ಐವರು ಸೈನಿಕರು ಸಾವು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪಿಆರ್‌ಒ ಡಿಫೆನ್ಸ್ ವರದಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪಿಆರ್‌ಒ ಡಿಫೆನ್ಸ್ ವರದಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಶಿಕ್ಷೆ ತಡೆ ಕೋರಿಕೆಯನ್ನು ತಿರಸ್ಕರಿಸಿದ ಸೂರತ್ ಕೋರ್ಟ್..!
ಭಟ ಧುರಿಯನ್ ಪ್ರದೇಶದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.ಆರಂಭಿಕ ವರದಿಗಳ ಪ್ರಕಾರ, ಸಿಡಿಲಿನ ಹೊಡೆತದಿಂದ ಸ್ಫೋಟ ಸಂಭವಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.ಪೂಂಚ್‌ನಿಂದ 90 ಕಿಲೋಮೀಟರ್ ದೂರದಲ್ಲಿರುವ ಸ್ಥಳಕ್ಕೆ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಧಾವಿಸಿದ್ದಾರೆ.ಸೇನೆಯಿಂದ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.