ಭದ್ರತೆ, ಅಭಿವೃದ್ಧಿಯತ್ತ ಗಮನ; ಈಶಾನ್ಯ ರಾಜ್ಯಗಳ ರಾಜ್ಯಪಾಲರು, ಸಿಎಂಗಳ ಜೊತೆ ಗೃಹ ಸಚಿವ ಶಾ ಭೇಟಿ

ಈಶಾನ್ಯ ಮಂಡಳಿಯ (ಎನ್‌ಇಸಿ) ಸಭೆಯಲ್ಲಿ ಅಮಿತ್ ಶಾ ವಿವಿಧ ಅಭಿವೃದ್ಧಿ ಸಂಬಂಧಿತ ವಿಷಯಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

Last Updated : Sep 2, 2019, 05:25 PM IST
ಭದ್ರತೆ, ಅಭಿವೃದ್ಧಿಯತ್ತ ಗಮನ; ಈಶಾನ್ಯ ರಾಜ್ಯಗಳ ರಾಜ್ಯಪಾಲರು, ಸಿಎಂಗಳ ಜೊತೆ ಗೃಹ ಸಚಿವ ಶಾ ಭೇಟಿ title=
File Image

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಎಂಟು ಈಶಾನ್ಯ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಸೆಪ್ಟೆಂಬರ್‌ನಲ್ಲಿ ಎರಡು ದಿನಗಳ ಕಾಲ ಭೇಟಿ ಮಾಡಿ ಪ್ರಸ್ತುತ ರಾಜ್ಯಗಳಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 8 ಮತ್ತು 9 ರಂದು ಗುವಾಹಟಿಯಲ್ಲಿ ನಡೆಯುವ ಈಶಾನ್ಯ ಮಂಡಳಿಯ (ಎನ್‌ಇಸಿ) ಸಮಗ್ರ ಸಭೆಯಲ್ಲಿ ಅಮಿತ್ ಶಾ ಅವರು ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ.

ಎನ್‌ಇಸಿ ಸಭೆಯಲ್ಲಿ ಗೃಹ ಸಚಿವರು ವಿವಿಧ ಅಭಿವೃದ್ಧಿ ಸಂಬಂಧಿತ ವಿಷಯಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಶಾನ್ಯ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಶಾ ಪ್ರತ್ಯೇಕ ಸಭೆ ನಡೆಸುವ ನಿರೀಕ್ಷೆಯಿದೆ.

ಅಸ್ಸಾಂ ಸರ್ಕಾರ ತನ್ನ ಅಂತಿಮ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಈ ಸಭೆ ನಡೆಯುತ್ತಿದೆ. ತ್ರಿಪುರ, ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿ ಸರ್ಕಾರವಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರಗಳ ಭಾಗವಾಗಿದೆ. ಇದಲ್ಲದೆ, ಮಿಜೋರಾಂ ಮತ್ತು ಸಿಕ್ಕಿಂನ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇಲ್ಲವಾದರೂ, ಇಲ್ಲಿನ ಆಡಳಿತ ಪಕ್ಷಗಳು ಕೇಂದ್ರದಲ್ಲಿನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ಬೆಂಬಲಿಸುತ್ತವೆ, ಅದರಲ್ಲಿ ಬಿಜೆಪಿ ಅತಿದೊಡ್ಡ ಸದಸ್ಯ ಬಲವಿದೆ.

Trending News