ರಾಂಚಿ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿದಂತೆ 16 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯವು ನಾಳೆ(ಶನಿವಾರ) ಮಧ್ಯಾಹ್ನ 2 ಗಂಟೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ. ಶುಕ್ರವಾರ ವಿಚಾರಣೆಯ ಬಳಿಕ ಲಾಲು ಪ್ರಸಾದ್ ಯಾದವ್ ಅವರ ವಕೀಲ ಚಿತ್ತರಂಜನ್ ಪ್ರಸಾದ್ ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದ್ದಾರೆ. 



COMMERCIAL BREAK
SCROLL TO CONTINUE READING

ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಆರ್.ಕೆ. ರಾಣಾ, ಜಗದೀಶ್ ಶರ್ಮಾ ಸೇರಿದಂತೆ 16 ಜನರನ್ನು ಡಿಯೋಘರ್ ಖಜಾನೆಯಿಂದ ರೂ. 89 ಲಕ್ಷ, 27 ಸಾವಿರ ರೂ. ಅಕ್ರಮ ಹಿಂತೆಗೆದುಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಡಿ.23ರಂದು ವಿಶೇಷ ಸಿಬಿಐ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದೆ. 


ಏತನ್ಮಧ್ಯೇ ವಯಸ್ಸು, ಅನಾರೋಗ್ಯ ಪರಿಗಣಿಸಿ ಕನಿಷ್ಠ ಶಿಕ್ಷೆ ವಿಧಿಸುವಂತೆ ಲಾಲು ಪ್ರಸಾದ್ ಯಾದವ್ ಶುಕ್ರವಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.