ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ(Greater Noida)ದಲ್ಲಿ ಬುಧವಾರ(ಸೆ.1) ಬೆಳಗ್ಗೆ ಆಘಾತಕಾರಿ ಘಟನೆಯೊಂದು ನಡೆದಿದೆ. ಪೂರಿ ಸಬ್ಜಿ ನೀಡಲು ವಿಳಂಬ ಮಾಡಿದ್ದಕ್ಕೆ ಸ್ವಿಗ್ಗಿ ಏಜೆಂಟ್ ವೊಬ್ಬ ರೆಸ್ಟೋರೆಂಟ್ ಮಾಲೀಕನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.


COMMERCIAL BREAK
SCROLL TO CONTINUE READING

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ , ಆನ್‌ಲೈನ್ ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿಯ ಡೆಲಿವರಿ ಏಜೆಂಟ್ ಪೂರಿ(Food Delivery Agent) ಸಬ್ಜಿ ನೀಡುವುದು ವಿಳಂಬವಾಗಿದ್ದಕ್ಕೆ ಉದ್ಯೋಗಿಯೊಂದಿಗೆ ಗಲಾಟೆ ಮಾಡಿದ್ದಾನೆ. ವಾಗ್ವಾದ ವಿಕೋಪಕ್ಕೆ ಹೋದಾಗ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ ರೆಸ್ಟೋರೆಂಟ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಆ ಪ್ರದೇಶದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.


ಇದನ್ನೂ ಓದಿ: Weather forecast for Sept : ಈ ಇಡೀ ತಿಂಗಳು ಸುರಿಯಲಿದೆ ಭಾರೀ ವರ್ಷಧಾರೆ, ಹವಾಮಾನ ಇಲಾಖೆಯ ಮುನ್ಸೂಚನೆ


ಕೊಲೆಯಾಗಿರುವ ವ್ಯಕ್ತಿಯನ್ನು ಸುನೀಲ್ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅವರು ಗ್ರೇಟರ್ ನೋಯ್ಡಾ(Greater Noida)ದ ಮಿತ್ರ ಸೊಸೈಟಿಯಲ್ಲಿ ‘ಜಾಮ್ ಜಾಮ್’ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದರು. ಚಿಕನ್ ಬಿರಿಯಾನಿ ಮತ್ತು ಪುರಿ ಸಬ್ಜಿ ಆರ್ಡರ್ ಸಂಗ್ರಹಿಸಲು ಸ್ವಿಗ್ಗಿ ಡೆಲಿವರಿ ಬಾಯ್ ಬುಧವಾರ ಬೆಳಗ್ಗೆ ರೆಸ್ಟೋರೆಂಟ್‌ಗೆ ಬಂದಿದ್ದರು. ಚಿಕನ್ ಬಿರಿಯಾನಿ ಆರ್ಡರ್ ಸಿದ್ಧವಾಗಿದೆ, ಪೂರಿ ಸಬ್ಜಿ ನೀಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಅಲ್ಲಿವರೆಗೂ ಕಾಯಿರಿ ಅಂತಾ ರೆಸ್ಟೋರೆಂಟ್‌ ಕೆಲಸಗಾರ ಹೇಳಿದ್ದಾನೆ.


ಇದರಿಂದ ಕೋಪಗೊಂಡ ಡೆಲಿವರಿ ಬಾಯ್(Swiggy Delivery Agent) ಕೆಲಸಗಾರನೊಂದಿಗೆ ಜಗಳವಾಡಲು ಪ್ರಾರಂಭಿಸಿದ್ದಾನೆ. ಆರ್ಡರ್ ನನಗೆ ಈಗಲೇ ಬೇಕು ಅಂತಾ ಗಲಾಟೆ ಮಾಡಿದ್ದಾನೆ. ಇದಲ್ಲದೆ ಕೆಲಸಗಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಜಗಳ ಬಿಡಿಸಲು ಸುನಿಲ್ ಮಧ್ಯಪ್ರವೇಶಿಸಿದ್ದಾರೆ. ಕೂಡಲೇ ತನ್ನ ಬಳಿ ಇದ್ದ ಗನ್ ನಿಂದ ಸುನಿಲ್ ಅವರ ತಲೆಗೆ ಗುಂಡು ಹಾರಿಸಿದ ಆರೋಪಿ ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿದ್ದ ಸುನಿಲ್ ಅವರನ್ನು ಯಥಾರ್ಥ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಸುನಿಲ್ ಸಾವನ್ನಪ್ಪಿದ್ದರು.  


ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ: ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು..!


ಆರೋಪಿ ಕುಡಿದ ಅಮಲಿನಲ್ಲಿ ಇದ್ದ. ತನ್ನ ಇನ್ನೊಬ್ಬ ಸ್ನೇಹಿತನ ಸಹಾಯದಿಂದ ರೆಸ್ಟೋರೆಂಟ್‌ ಮಾಲೀಕರಿಗೆ(Restaurant Owner) ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.