ನವದೆಹಲಿ: ಮುಂದಿನ ಮೂರು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೇ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.


COMMERCIAL BREAK
SCROLL TO CONTINUE READING

ಮೇ 11 ಮತ್ತು ಮೇ 13 ರ ನಡುವೆ ದೇಶದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ವಾಯುವ್ಯ ಬಯಲು ಪ್ರದೇಶದ ಕೆಲವು ಭಾಗಗಳಲ್ಲಿಯೂ ಮಳೆಯಾಗಬಹುದು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ.


ಇದನ್ನೂ ಓದಿ - Karnataka Covid-19 Updates: ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಿ ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ


ಹೊಸ ಪಾಶ್ಚಾತ್ಯ ಅವಾಂತರ (ಡಬ್ಲ್ಯುಡಿ) ಮೇ 11 ರಿಂದ ಪಶ್ಚಿಮ ಹಿಮಾಲಯನ್ ಪ್ರದೇಶ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತದೆ. ಅರೇಬಿಯನ್ ಸಮುದ್ರದಿಂದ ಬರುವ ಕಡಿಮೆ ಒತ್ತಡ ಗಾಳಿ ಮತ್ತು ತೇವಾಂಶದಿಂದಾಗಿ ಪಶ್ಚಿಮ ಹಿಮಾಲಯನ್ ಪ್ರದೇಶದ ಹೆಚ್ಚಿನ ಭಾಗದಲ್ಲಿ ಮಳೆ (Rain) ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. 


ಅದೇ ಸಮಯದಲ್ಲಿ, ವಾಯುವ್ಯ ಭಾರತದ ಕೆಲವು ಬಯಲು ಪ್ರದೇಶಗಳಲ್ಲಿಯೂ ಮಳೆಯಾಗುತ್ತದೆ. ಈ ಅವಧಿಯಲ್ಲಿ ಮೇ 12 ಮತ್ತು 13 ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ - Monsoon Season: ರಾಜ್ಯದಲ್ಲಿ ಮಾನ್ಸೂನ್ ಆರಂಭ: ರೈತರಲ್ಲಿ ಮುಖದಲ್ಲಿ ಭರವಸೆ!


ಪೂರ್ವ ಭಾರತದಲ್ಲೂ ಮಳೆಯ ನಿರೀಕ್ಷೆ:
ಪಶ್ಚಿಮ ಮಾರುತಗಳಿಗೆ ಒಡ್ಡಿಕೊಳ್ಳುವುದರಿಂದ ದಕ್ಷಿಣದಿಂದ ಕಡಿಮೆ ಒತ್ತಡ ಗಾಳಿ ಬೀಸುತ್ತಿರುವುದರಿಂದ, ಈಶಾನ್ಯ ರಾಜ್ಯಗಳು ಮತ್ತು ಪಶ್ಚಿಮ ಬಂಗಾಳದಲ್ಲೂ ಮಳೆ ಬೀಳುವ ನಿರೀಕ್ಷೆಯಿದೆ. ಇದರೊಂದಿಗೆ ಮುಂದಿನ 4-5 ದಿನಗಳವರೆಗೆ ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.