close

News WrapGet Handpicked Stories from our editors directly to your mailbox

ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಜೈ ಶಂಕರ್ ಅವರನ್ನು ವಿದೇಶಾಂಗ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೇಮಕ ಮಾಡಿದ್ದು, ಮೇ 30 ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 

Updated: Jun 24, 2019 , 04:59 PM IST
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ವಿದೇಶಾಂಗ ಖಾತೆ ಸಚಿವ ಎಸ್.ಜೈಶಂಕರ್ ಅವರು ಸೋಮವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಪಾರ್ಲಿಮೆಂಟ್ ಹೌಸ್ ನಲ್ಲಿ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಜೈಶಂಕರ್ ಬಿಜೆಪಿಗೆ ಸೇರ್ಪಡೆಯಾದರು.

ಜೈ ಶಂಕರ್ ಅವರನ್ನು ವಿದೇಶಾಂಗ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೇಮಕ ಮಾಡಿದ್ದು, ಮೇ 30 ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾರತ ಹಾಗೂ ಅಮೆರಿಕ ನಡುವೆ ನಾಗರಿಕ ಅಣ್ವಸ್ತ್ರ ಒಪ್ಪಂದ ಏರ್ಪಟ್ಟ ಸಂದರ್ಭದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುಬ್ರಮಣ್ಯಂ ಜೈಶಂಕರ್ ವಿದೇಶಾಂಗ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. 

ನಿಯಮದ ಪ್ರಕಾರ ಜೈಶಂಕರ್ ಅವರು ಸಂಸತ್ತಿಗೆ ಆಯ್ಕೆಯಾಗದೇ ನೇರವಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದರಿಂದ ಮುಂದಿನ ಆರು ತಿಂಗಳ ಒಳಗಾಗಿ ಸಂಸತ್ ಸದಸ್ಯರಾಗಬೇಕಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜೈಶಂಕರ್ ಅವರನ್ನು ಗುಜರಾತ್ ರಾಜ್ಯಸಭಾ ಅಭ್ಯರ್ಥಿಯಾಗಿ ನಾಮಕರಣ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.