ಮುಂಬೈ: ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಫೆಬ್ರವರಿ 12 ರಂದು ಶನಿವಾರ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.


COMMERCIAL BREAK
SCROLL TO CONTINUE READING

"ದಿವಂಗತ ರೂಪಾ ಬಜಾಜ್ ಅವರ ಪತಿ ಮತ್ತು ರಾಜೀವ್ / ದೀಪಾ, ಸಂಜೀವ್ / ಶೆಫಾಲಿ ಮತ್ತು ಸುನೈನಾ / ಮನೀಶ್ ಅವರ ತಂದೆ ಶ್ರೀ ರಾಹುಲ್ ಬಜಾಜ್ ಅವರ ನಿಧನದ ಬಗ್ಗೆ ನಾನು ನಿಮಗೆ ತೀವ್ರ ದುಃಖದಿಂದ ತಿಳಿಸುತ್ತೇನೆ. ಅವರು ಫೆಬ್ರವರಿ 12 ರ ಮಧ್ಯಾಹ್ನ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನಿಧನರಾದರು" ಎಂದು ಬಜಾಜ್ ಗ್ರೂಪ್‌ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ-10 Rupee Coin: 10 ರೂಪಾಯಿಯ ಯಾವ ನಾಣ್ಯ ಮಾನ್ಯವಾಗಿದೆ? ಗೊಂದಲ ನಿವಾರಿಸಿದ ಸರ್ಕಾರ


ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಪುರವೇಜ್ ಗ್ರಾಂಟ್ ಹೇಳಿದ್ದಾರೆ.ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.


ಜೂನ್ 10, 1938 ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ನೀಡಲಾಯಿತು. ಬಜಾಜ್ ಅವರು ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದರು.


ರಾಹುಲ್ ಬಜಾಜ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, "ಯಶಸ್ವಿ ಉದ್ಯಮಿ, ಲೋಕೋಪಕಾರಿ ಮತ್ತು ಬಜಾಜ್ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಜಿ ಅವರಿಗೆ ನನ್ನ ಹೃತ್ಪೂರ್ವಕ ನಮನಗಳು.ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ರಾಹುಲ್ ಜಿ ಅವರೊಂದಿಗೆ ನಾನು ಹಲವು ವರ್ಷಗಳ ಕಾಲ ವೈಯಕ್ತಿಕ ಸಂಬಂಧವನ್ನು ಹೊಂದಿದ್ದೇನೆ" ಎಂದು ಸ್ಮರಿಸಿದರು.


ಇದನ್ನೂ ಓದಿ-#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್


"ದೇಶದ ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಜಿ ಅವರ ನಿಧನದ ದುಃಖದ ಸುದ್ದಿ. ಅವರು ಆರ್ಥಿಕ ರಂಗದಲ್ಲಿ ದೇಶದ ಪ್ರಗತಿಗೆ ದೊಡ್ಡ ಕೊಡುಗೆ ನೀಡಿದ್ದಾರೆ.ಅಂತಹ ಮಹಾನ್ ವ್ಯಕ್ತಿಗೆ ನನ್ನ ಹೃದಯಪೂರ್ವಕ ಶ್ರದ್ಧಾಂಜಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


"ಪದ್ಮಭೂಷಣ ರಾಹುಲ್ ಬಜಾಜ್ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರು ನಮ್ಮ ದೇಶ ಕಂಡ ಅಗ್ರಗಣ್ಯ ಉದ್ಯಮಿಗಳಲ್ಲಿ ಒಬ್ಬರಾಗಿದ್ದರು ಮತ್ತು ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ.ನಾವು ಅವರನ್ನು ಮತ್ತು ಅವರ ಬುದ್ಧಿವಂತ ಸಲಹೆಯನ್ನು ತುಂಬಾ ಕಳೆದುಕೊಳ್ಳುತ್ತೇವೆ.ರಾಜೀವ್, ಸಂಜೀವ್, ಸುನೈನಾ ಮತ್ತು ಬಜಾಜ್ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಸಂಸದೆ ಸುಪ್ರಿಯಾ ಸುಳೆ ಕಂಬನಿ ಮಿಡಿದಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.