ನವದೆಹಲಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಮನೋಹರ್ ಸಿಂಗ್ ಗಿಲ್ ಭಾನುವಾರ ದಕ್ಷಿಣ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಕೆಲಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 86 ವರ್ಷ ವಯಸ್ಸಾಗಿತ್ತು. ಗಿಲ್ ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಗಿಲ್ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ ಎಂದು ತಿಳಿದುಬಂದಿದೆ.
ಮಾಜಿ ಅಧಿಕಾರಿಯಾಗಿದ್ದ ಎಂ.ಎಸ್.ಗಿಲ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಪ್ರಕಾಶ್ ಸಿಂಗ್ ಬಾದಲ್ ಅವರಡಿ ಯುವ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಗಿಲ್ ಅವರು ಡಿಸೆಂಬರ್ 1996 ಮತ್ತು ಜೂನ್ 2001ರ ನಡುವೆ ಮುಖ್ಯ ಚುನಾವಣಾ ಆಯುಕ್ತರಾಗಿ (CEC) ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ: Daily GK Quiz: ಕೇವಲ 2 ಕಂಬಗಳ ಮೇಲೆ ನಿಂತಿರುವ ವಿಶ್ವದ ಅತ್ಯಂತ ಚಿಕ್ಕ ದೇಶ ಯಾವುದು?
ಟಿ.ಎನ್.ಶೇಷನ್ ಅವರು ಚುನಾವಣಾ ಆಯೋಗದ ಮುಖ್ಯಸ್ಥರಾಗಿದ್ದಾಗ ಗಿಲ್ ಮತ್ತು ಜಿವಿಜಿ ಕೃಷ್ಣಮೂರ್ತಿ ಅವರನ್ನು ಚುನಾವಣಾ ಆಯೋಗದ ಸದಸ್ಯರನ್ನಾಗಿ ಮಾಡಲಾಗಿತ್ತು. ಅದೇ ಸಮಯದಲ್ಲಿ ಚುನಾವಣಾ ಆಯೋಗವನ್ನು ತ್ರಿಸದಸ್ಯ ಸಂಸ್ಥೆಯಾಗಿ ಮಾಡಲಾಯಿತು ಎಂದು ಮಾಜಿ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್‍ನಿಂದ ರಾಜ್ಯಸಭೆಗೆ: ಎಂ.ಎಸ್.ಗಿಲ್ ಅವರು ಬಹುಶಃ ರಾಜಕೀಯಕ್ಕೆ ಪ್ರವೇಶಿಸಿದ ಮೊದಲ ಮಾಜಿ ಸಿಇಸಿ. ಗಿಲ್ ಕಾಂಗ್ರೆಸ್ ಸದಸ್ಯರಾಗಿ ರಾಜ್ಯಸಭೆಗೆ ಪ್ರವೇಶಿಸಿದ್ದರು ಮತ್ತು 2008ರಲ್ಲಿ ಕೇಂದ್ರ ಕ್ರೀಡಾ ಸಚಿವರಾಗಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಿಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಇದನ್ನೂ ಓದಿ: ದೆಹಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನ..!
Extremely saddened at the passing away of Former Union Minister, Padma Vibhushan, Shri Manohar Singh Gill Ji.
As a valued colleague in the UPA Govt and earlier as a civil servant, his contributions to development of the nation in varied fields like sports, electoral processes… pic.twitter.com/i2L5GCpS3B
— Mallikarjun Kharge (@kharge) October 15, 2023
ಮಲ್ಲಿಕಾರ್ಜುನ ಖರ್ಗೆ ಸಂತಾಪ: ‘ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (UPA) ಸರ್ಕಾರದಲ್ಲಿ ಮೌಲ್ಯಯುತ ಸಹೋದ್ಯೋಗಿಯಾಗಿ ಮತ್ತು ಅದಕ್ಕೂ ಮೊದಲು ಸಾರ್ವಜನಿಕ ಸೇವಕರಾಗಿ, ಕ್ರೀಡೆ, ಚುನಾವಣಾ ಪ್ರಕ್ರಿಯೆಗಳು ಮತ್ತು ಕೃಷಿಯಂತಹ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ದೀರ್ಘಕಾಲ ಸ್ಮರಣೀಯವಾಗಿದೆ’ ಎಂದು ಸ್ಮರಿಸಿದ್ದಾರೆ.
ಗಿಲ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದು, ‘ಮಾಜಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಕೇಂದ್ರ ಸಚಿವ ಡಾ.ಮನೋಹರ್ ಸಿಂಗ್ ಗಿಲ್ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಅವರ ಕುಟುಂಬದೊಂದಿಗೆ ನನ್ನ ಸಂತಾಪವಿದೆ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ. ಅನೇಕ ರಾಜಕೀಯ ಗಣ್ಯರು ಸಹ ಗಿಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.