ಲೋಕಸಭಾ ಚುನಾವಣೆ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆ

2019 ರ ಲೋಕಸಭಾ ಚುನಾವಣೆಯಲ್ಲಿ, ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷ ಸಿದ್ಧತೆ ನಡೆಸಿದೆ.  

Last Updated : Mar 22, 2019, 12:37 PM IST
ಲೋಕಸಭಾ ಚುನಾವಣೆ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆ title=
Pic Courtesy: ANI

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಇಂದು ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ರವಿ ಶಂಕರ್ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಸೇರ್ಪಡೆಯಾದರು. 

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಗೌತಮ್ ಗಂಭೀರ್, ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಷನ್ ನಿಂದ ಪ್ರಭಾವಿತರಾಗಿದ್ದು, ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದರು. ಇದೇ ವೇಳೆ ತಾವು ಪ್ರಧಾನ ಮಂತ್ರಿಯವರ ನಿರೀಕ್ಷೆಗಳನ್ನೂ ಪೂರೈಸಲು ಪ್ರಯತ್ನಿಸುವುದಾಗಿ ತಿಳಿಸಿದರು.

2019 ರ ಲೋಕಸಭಾ ಚುನಾವಣೆಯಲ್ಲಿ, ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಕ್ಷ ಸಿದ್ಧತೆ ನಡೆಸಿದ್ದು, ಪದ್ಮಶ್ರೀ ಪುರಸ್ಕೃತ ಗೌತಮ್ ಗಂಭೀರ್ ಅವರನ್ನು ನವದೆಹಲಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಪ್ರಸ್ತುತ ಮೀನಾಕ್ಷಿ ಲೇಖಿ ಈ ಕ್ಷೇತ್ರದ ಸಂಸದರಾಗಿದ್ದು, ಅವರಿಗೆ ಟಿಕೆಟ್ ನಿರಾಕರಿಸಿ, ಗಂಭೀರ್ ಗೆ ಮಣೆ ಹಾಕುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಗಂಭೀರ್ ಇದೆ ಕ್ಷೇತ್ರದ ರಾಜಿಂದರ್ ನಗರದ ನಿವಾಸಿಯಾಗಿದ್ದಾರೆ. ಮೇ 12 ರಂದು ದೆಹಲಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

Trending News