ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರುಣ್ ಜೇಟ್ಲಿ ಅವರನ್ನು ನೋಡಲು ಬೆಳಿಗ್ಗೆ 11 ಗಂಟೆಗೆ ಏಮ್ಸ್ ಗೆ ಹೋಗಲಿದ್ದಾರೆ.

Last Updated : Aug 16, 2019, 10:21 AM IST
ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ title=
File Image

ನವದೆಹಲಿ: ಕಳೆದ ಹಲವು ದಿನಗಳಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಹಣಕಾಸು ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರುಣ್ ಜೇಟ್ಲಿ ಅವರನ್ನು ನೋಡಲು ಬೆಳಿಗ್ಗೆ 11 ಗಂಟೆಗೆ ಏಮ್ಸ್ ಗೆ ಭೇಟಿ ನೀಡಲಿದ್ದಾರೆ.

ಹಿರಿಯ ಏಮ್ಸ್ ವೈದ್ಯರೊಬ್ಬರು ವೈದ್ಯಕೀಯ ಪರೀಕ್ಷೆಗೆ ಬೆಳಿಗ್ಗೆ 10 ಗಂಟೆಗೆ ಜೇಟ್ಲಿಯನ್ನು ಹೃದಯರಕ್ತನಾಳದ ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ತಿಳಿಸಿದ್ದರು. ಅಂತಃಸ್ರಾವಶಾಸ್ತ್ರಜ್ಞರು, ನೆಫ್ರಾಲಜಿಸ್ಟ್‌ಗಳು ಮತ್ತು ಹೃದ್ರೋಗ ತಜ್ಞರ ತಂಡವು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ. "ಈ ಸಮಯದಲ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ನಾವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ" ಎಂದು ವೈದ್ಯರು ಹೇಳಿದ್ದಾರೆ.

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಆಗಸ್ಟ್ 9 ರಂದು ಅವರನ್ನು ಏಮ್ಸ್ ಗೆ ದಾಖಲಿಸಲಾಯಿತು. ಹೃದಯ-ನರ ವಿಭಾಗದ ಐಸಿಯುನಲ್ಲಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಬಿಜೆಪಿಯ ಇತರ ಉನ್ನತ ನಾಯಕರು ಆಸ್ಪತ್ರೆಗೆ ಭೇಟಿ ನೀಡಲು ಜೇಟ್ಲಿಗೆ ಭೇಟಿ ನೀಡಿದ್ದರು.

 

Trending News