ಪಶ್ಚಿಮ ಬಂಗಾಳ: ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಕ್ರಿಕೆಟಿಗ ಅಶೋಕ್ ದಿಂಡ ಅವರು ಬುಧವಾರ ಕೋಲ್ಕತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸೇರಿದರು.


COMMERCIAL BREAK
SCROLL TO CONTINUE READING

ಫೆಬ್ರವರಿ 2ರಂದು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಅಶೋಕ್ ದಿಂಡ(Ashoke Dinda) ನಿವೃತ್ತಿ ಘೋಷಿಸಿದ ದಿನಾ, 36 ವರ್ಷದ ವೇಗದ ಬೌಲರ್ ಅಲ್ಪಕಾಲೀನ ಅಂತಾರಾಷ್ಟ್ರೀಯ ವೃತ್ತಿಜೀವನ ಹೊಂದಿದ್ದರೂ, ದೇಶೀಯ ಕ್ರಿಕೆಟ್ ನಲ್ಲಿ ಬಂಗಾಳಕ್ಕಾಗಿ ನೀಡಿದ ಕೊಡುಗೆ ಅಪಾರ.


RBI Office Attendant Recruitment 2021 - 10ನೇ ತರಗತಿ ಪಾಸಾದವರಿಗೆ Reserve Bank Of India ನಲ್ಲಿ ಉದ್ಯೋಗಾವಕಾಶ


ಬಂಗಾಳ ಪರ 116 ಪ್ರಥಮ ದರ್ಜೆ ಪಂದ್ಯ(Match)ಗಳನ್ನಾಡಿರುವ ಡಿಂಡಾ 28.28 ರ ಬೌಲಿಂಗ್ ಸರಾಸರಿಯಲ್ಲಿ 420 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಲಿಸ್ಟ್ ಎ ಪಂದ್ಯಗಳಲ್ಲಿ ಅವರು ತಮ್ಮ ವೃತ್ತಿ ಜೀವನದಲ್ಲಿ 151 ವಿಕೆಟ್ ಗಳನ್ನು ಕಬಳಿಸಿ98 ಪಂದ್ಯಗಳನ್ನು ಆಡಿದ್ದರು.


ಕೊರೊನಾ ಪ್ರಕರಣ ಹೆಚ್ಚಳದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ


ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 13 ಏಕದಿನ ಮತ್ತು 9 ಟಿ20 ಪಂದ್ಯ(T20 Match)ಗಳನ್ನು ಆಡಿರುವ ಅವರು ಕ್ರಮವಾಗಿ 12 ಮತ್ತು 17 ವಿಕೆಟ್ ಗಳನ್ನು ಕಬಳಿಸಿದ್ದಾರೆ.


Randeep Singh Surjewala: 'ಬಿಜೆಪಿಯಿಂದ ಉತ್ತರ-ದಕ್ಷಿಣ ವಿಭಜನೆ ಟೂಲ್‌ಕಿಟ್‌ ಮಾರಾಟ'


ಕಳೆದ ವಾರ ಪಶ್ಚಿಮ ಬಂಗಾಳ ಬಿಜೆಪಿ ವೀಕ್ಷಕ ಕೈಲಾಶ್ ವಿಜಯ ವರ್ಗೀಯ, ಬಿಜೆಪಿ(BJP) ರಾಜ್ಯಸಭಾ ಸಂಸದ ಸ್ವಪನ್ ದಾಸ್ ಗುಪ್ತಾ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಸಮ್ಮುಖದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಜನಪ್ರಿಯ ಬಂಗಾಳಿ ನಟ ಯಶ್ ದಾಸ್ ಗುಪ್ತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ


ಚುನಾವಣೆ ಸಮೀಪಿಸುತ್ತಿರುವಂತೆಯೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅವರನ್ನು ಸೋಲಿಸುವ ಎಲ್ಲಾ ತಂತ್ರಗಾರಿಕೆಯನ್ನು ಹೆಣೆಯುತ್ತಿದೆ.


'EPFO’ ನಿಂದ ಹೊಸ ಮಾರ್ಗಸೂಚಿ: ಇವು ನಿಮ್ಮ ಮೇಲೆ ಬೀಳಲಿದೆ ನೇರ ಪರಿಣಾಮ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.