ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ; ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಏಮ್ಸ್ ಗೆ ಭೇಟಿ ನೀಡಿ ಕೇಂದ್ರ ಮಾಜಿ ಹಣಕಾಸು ಸಚಿವರ ಆರೋಗ್ಯ ಸ್ಥಿತಿ ವಿಚಾರಿಸಿದರು.   

Last Updated : Aug 18, 2019, 01:05 PM IST
ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ; ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ title=

ನವದೆಹಲಿ: ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಭಾನುವಾರವೂ ಗಂಭೀರವಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ.

ಮೂಲಗಳ ಪ್ರಕಾರ ಜೇಟ್ಲಿ ಅವರನ್ನು ಎಕ್ಟ್ರಾ-ಕಾರ್ಪೊರಿಯಲ್‌ ಮೆಂಬ್ರೇನ್‌ ಆಕ್ಸಿಜನೇಷನ್‌ ಎಂಬ ವ್ಯವಸ್ಥೆಯಲ್ಲಿ ಇಡಲಾಗಿದೆ. ಇಸಿಎಂಒ ವ್ಯವಸ್ಥೆ ಎಂದರೆ, ಹೃದಯ ಮತ್ತು ಶ್ವಾಸಕೋಶಗಳು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗದೆ ಇದ್ದಾಗ ಹೊರಗಿನಿಂದ ಕೃತಕವಾಗಿ ಸಜ್ಜುಗೊಳಿಸುವುದು. 

ಕಳೆದ ಒಂದು ವಾರದಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರುಣ್ ಜೇಟ್ಲಿ ಅವರ ಆರೋಗ್ಯ ಶುಕ್ರವಾರ ಮತ್ತಷ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದರು. ಭಾನುವಾರ ಬೆಳಿಗ್ಗೆಯೂ ಸಹ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದರು. 

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಏಮ್ಸ್ ಗೆ ಭೇಟಿ ನೀಡಿ ಕೇಂದ್ರ ಮಾಜಿ ಹಣಕಾಸು ಸಚಿವರ ಆರೋಗ್ಯ ಸ್ಥಿತಿ ವಿಚಾರಿಸಿದರು. 

ಏರ್ ಚೀಫ್ ಮಾರ್ಷಲ್ ಬೀರೇಂದರ್ ಸಿಂಗ್ ಧನೋವಾ, ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ, ಮಾಯಾವತಿ ಸೇರಿದಂತೆ ಅನೇಕ ನಾಯಕರು ಮಾಜಿ ಹಣಕಾಸು ಸಚಿವರು ಆಸ್ಪತ್ರೆಗೆ ಭೇಟಿ ನೀಡಿದರು.

Trending News