ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93ವರ್ಷ) ಅವರನ್ನು ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93ವರ್ಷ) ಅವರನ್ನು ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಯಮಿತ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ದೆಹಲಿ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ವಾಜಪೇಯಿ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಭಾರತೀಯ ಜನತಾ ಪಕ್ಷ(BJP)ದ ಹಿರಿಯ ಮುಖಂಡರಾದ ವಾಜಪೇಯಿ ಅವರು 1996ರ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಬಿಜೆಪಿ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾಗಿ 5 ವರ್ಷಗಳ ಕಾಲ ಪೂರ್ಣಾವಧಿ ಸರ್ಕಾರ ನಡೆಸಿದ್ದರು.