close

News WrapGet Handpicked Stories from our editors directly to your mailbox

ರಾಜ್ಯಸಭೆಗೆ ಮರಳಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನವನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬೋಧಿಸಿದರು.

Updated: Aug 23, 2019 , 12:49 PM IST
ರಾಜ್ಯಸಭೆಗೆ ಮರಳಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ANI PHOTO

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನವನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬೋಧಿಸಿದರು.

ರಾಜ್ಯಸಭಾ ಅಧ್ಯಕ್ಷರ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ಉನ್ನತ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಮ್ ನಬಿ ಆಜಾದ್, ಅಹ್ಮದ್ ಪಟೇಲ್ ಮತ್ತು ಆನಂದ್ ಶರ್ಮಾ ಉಪಸ್ಥಿತರಿದ್ದರು.ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೆಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

86 ವರ್ಷದ ಮನಮೋಹನ್ ಸಿಂಗ್ ಅವರು ರಾಜಸ್ಥಾನದಿಂದ ರಾಜ್ಯಸಭೆಯ ಸದಸ್ಯರಾಗಿ ಮರಳಿದ್ದಾರೆ. ಬಿಜೆಪಿ ತನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು. ಈ ವರ್ಷ ಜೂನ್ 14 ರಂದು ಮೇಲ್ಮನೆಯಿಂದ ನಿವೃತ್ತಿಯಾದ ನಂತರ ಸ್ವಲ್ಪ ಸಮಯದ ನಂತರ ಮನಮೋಹನ್ ಸಿಂಗ್ ರಾಜ್ಯಸಭೆಗೆ ಮರಳಿದರು.

ಈ ಹಿಂದೆ ಅವರು ರಾಜ್ಯಸಭೆಯಲ್ಲಿ ಅಸ್ಸಾಂ ರಾಜ್ಯವನ್ನು ದೀರ್ಘಕಾಲದವರೆಗೆ ಪ್ರತಿನಿಧಿಸಿದ್ದರು.