ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ: ಏಮ್ಸ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ತಿಳಿಸಿದೆ. 

Last Updated : Jun 12, 2018, 05:36 PM IST
ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ: ಏಮ್ಸ್ title=

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ತಿಳಿಸಿದೆ. 

ಮೂತ್ರನಾಳದ ಸೋಂಕಿನಿಂದ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 93 ವರ್ಷದ ವಾಜಪೇಯಿ ಅವರಿಗೆ ಆಸ್ಪತ್ರೆ ನಿರ್ದೇಶಕ ಡಾ.ರಂದೀಪ್ ಗುಲೆರಿಯಾ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ. ಆದರೆ ಮೂತ್ರನಾಳದ ಸೋಂಕು ಸಂಪೂರ್ಣ ನಿವಾರಣೆ ಆಗುವವರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಿಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಈಗಾಗಲೇ ವಾಜಪೇಯಿ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಮುಖಂಡರು ಆಸ್ಪತ್ರೆಗೆ ತೆರಳಿ ವಾಜಪೇಯಿ ಅವರ ಆರೋಗ್ಯ ವಿಚಾರಿಸುತ್ತಿದ್ದು, ಶೀಘ್ರ ಗುಣಮುಖರಾಗಲೆಂದು ಆಶಿಸಿದ್ದಾರೆ. 

ಭಾರತೀಯ ಜನತಾ ಪಕ್ಷ(BJP)ದ ಹಿರಿಯ ಮುಖಂಡರಾದ ವಾಜಪೇಯಿ ಅವರು 1996ರ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಬಿಜೆಪಿ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾಗಿ 5 ವರ್ಷಗಳ ಕಾಲ ಪೂರ್ಣಾವಧಿ ಸರ್ಕಾರ ನಡೆಸಿದ್ದರು. 

Trending News