ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ‘ಝಡ್‌ ಪ್ಲಸ್‌’ ಭದ್ರತೆ

ಕೇಂದ್ರೀಯ ಗುಪ್ತಚರ ಇಲಾಖೆ ಸಲಹೆ ಮೇರೆಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕೇಂದ್ರ ಸರ್ಕಾರ ‘ಝಡ್‌ ಪ್ಲಸ್‌’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

Written by - Krishna N K | Last Updated : Sep 7, 2022, 08:50 PM IST
  • ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ‘ಝಡ್‌ ಪ್ಲಸ್‌’ ಶ್ರೇಣಿಯ ವಿಐಪಿ ಭದ್ರತೆ
  • ಸೆ.5ರಿಂದಲೇ ಯೋಧರು ಕೋವಿಂದ್ ಅವರ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ
  • ಶಸ್ತ್ರ ಸಜ್ಜಿತ ಬೆಂಗಾವಲು ಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಭದ್ರತೆ
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ‘ಝಡ್‌ ಪ್ಲಸ್‌’ ಭದ್ರತೆ title=

ನವದೆಹಲಿ : ಕೇಂದ್ರೀಯ ಗುಪ್ತಚರ ಇಲಾಖೆ ಸಲಹೆ ಮೇರೆಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕೇಂದ್ರ ಸರ್ಕಾರ ‘ಝಡ್‌ ಪ್ಲಸ್‌’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸೆ.5ರಿಂದಲೇ ಯೋಧರು ಕೋವಿಂದ್ ಅವರ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ರಾಮನಾಥ್ ಕೋವಿಂದ್ ಅವರು ಪ್ರಯಾಣಿಸುವ ವೇಳೆ ಶಸ್ತ್ರ ಸಜ್ಜಿತ ಬೆಂಗಾವಲು ಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಭದ್ರತೆ ಒದಗಿಸಲಿದೆ. ಕೇಂದ್ರೀಯ ಗುಪ್ತಚರ ಇಲಾಖೆ ಸಲಹೆಯ ಮೇರೆಗೆ ಕೇಂದ್ರ ಗೃಹ ಸಚಿವಾಲಯ ಝಡ್‌ ಪ್ಲಸ್‌ ಶ್ರೇಣಿಯ ಭದ್ರತೆಗೆ ಅನುಮೋದನೆ ನೀಡಿದೆ. ಅಲ್ಲದೆ, ದೆಹಲಿಯ ಜನಪಥ್‌ ರಸ್ತೆಯಲ್ಲಿರುವ ಅವರ ನಿವಾಸಕ್ಕೂ ಭದ್ರತೆ ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್ ಸೋಲಿನ ನಂತರ, ಟೀಂ ಇಂಡಿಯಾದಲ್ಲಿ ಮಾಡಬೇಕು ಈ 3 ಬದಲಾವಣೆಗಳು!

ಐದು ವರ್ಷದ ಅವಧಿ ಮುಗಿದ ಹಿನ್ನೆಲೆ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಸ್ಥಾನದಿಂದ ಕೆಳಗಿಳಿದಿದ್ದರು. 25 ಜುಲೈ 2022 ರಂದು ರಾಷ್ಟ್ರದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಅಧಿಕಾರ ಸ್ವೀಕಾರ ಮಾಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News