ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ, ಏಮ್ಸ್ ನಿಂದ ಬಿಡುಗಡೆ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭಾನುವಾರ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ (Manmohan Singh) ಅವರನ್ನು ಭಾನುವಾರ ಸಂಜೆ 5.20 ರ ಸುಮಾರಿಗೆ ಡಿಸ್ಚಾರ್ಜ್ ಮಾಡಲಾಗಿದೆ.ಅವರು ಈಗ ಚೇತರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 89 ವರ್ಷದ ಸಿಂಗ್ ಅವರು ಕಳೆದ 18 ದಿನಗಳಿಂದ ದೇಶದ ಪ್ರಮುಖ ವೈದ್ಯಕೀಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಜ್ವರ, ದೌರ್ಬಲ್ಯ ಮತ್ತು ಸಾಮಾನ್ಯ ಅಸ್ವಸ್ಥತೆಯ ದೂರಿನ ನಂತರ ಅವರನ್ನು ಅಕ್ಟೋಬರ್ 13 ರಂದು ಏಮ್ಸ್ ಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಆರೋಗ್ಯದಲ್ಲಿ ಏರುಪೇರು, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ AIIMSಗೆ ದಾಖಲು
ಡಾ ನಿತೀಶ್ ನಾಯಕ್ ನೇತೃತ್ವದ ತಜ್ಞರ ತಂಡದ ಆರೈಕೆಯಲ್ಲಿ ಆಸ್ಪತ್ರೆಯ ಹೃದಯ ಮತ್ತು ನರವಿಜ್ಞಾನ ಕೇಂದ್ರದ ಖಾಸಗಿ ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿತ್ತು.ನಾಯಕ್ ಹೃದ್ರೋಗ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದು, ಹಲವು ವರ್ಷಗಳಿಂದ ಮಾಜಿ ಪ್ರಧಾನಿ ಸಿಂಗ್ ಅವರಿಗೆ ವೈದ್ಯರಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ