ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೈದ 6 ಹಂತಕರ ಬಿಡುಗಡೆ

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಶ್ರೀಹರನ್ ಮತ್ತು ಐವರು ಅಪರಾಧಿಗಳನ್ನು 33 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದೆ.

Written by - Zee Kannada News Desk | Last Updated : Nov 11, 2022, 03:53 PM IST
  • ಮೇ ತಿಂಗಳಲ್ಲಿ,ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತು.
  • ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.
  • ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿರುವುದನ್ನು ನ್ಯಾಯಾಲಯ ಗಮನಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೈದ 6 ಹಂತಕರ ಬಿಡುಗಡೆ title=
file photo

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಶ್ರೀಹರನ್ ಮತ್ತು ಐವರು ಅಪರಾಧಿಗಳನ್ನು 33 ವರ್ಷಗಳ ಜೈಲುವಾಸದ ನಂತರ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದೆ.

ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತು. ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿರುವುದನ್ನು ನ್ಯಾಯಾಲಯ ಗಮನಿಸಿದೆ.

ನಳಿನಿ ಅವರಲ್ಲದೆ, 1991 ರ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಗಾಗಿ ಜೈಲು ಪಾಲಾದ ಇತರರೆಂದರೆ ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್‌ಪಿ ರವಿಚಂದ್ರನ್.

ಇದನ್ನೂ ಓದಿ : Side Effects Of Earbuds: ಇಯರ್‌ ಬಡ್‌ನಿಂದ ಕಿವಿ ಸ್ವಚ್ಛಗೊಳಿಸುವ ಮುನ್ನ ಎಚ್ಚರ!

ರಾಜೀವ್ ಗಾಂಧಿ ಹಂತಕರ ಪ್ರಕರಣವು ತಮಿಳುನಾಡಿನಲ್ಲಿ ಸಾಕಷ್ಟು ಪರಿಣಾಮವನ್ನು ಹುಟ್ಟು ಹಾಕಿದೆ.ಎಐಎಡಿಎಂಕೆ ಅಥವಾ ಡಿಎಂಕೆ ನೇತೃತ್ವದ ರಾಜ್ಯದ ಪ್ರತಿಯೊಂದು ಸರ್ಕಾರವೂ ಅವರ ಸ್ವಾತಂತ್ರ್ಯಕ್ಕಾಗಿ ಪ್ರಚಾರ ಮಾಡಿದೆ. ರಾಜೀವ್ ಗಾಂಧಿಯವರ ಹತ್ಯೆಯಲ್ಲಿ ಏಳು ಕೈದಿಗಳು ಸಣ್ಣ ಪಾತ್ರಗಳನ್ನು ನಿರ್ವಹಿಸಿದ್ದಾರೆ.ರಾಜೀವ್ ಗಾಂಧಿಯವರು ಮೇ 21,1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನೆರೆಯ ಶ್ರೀಲಂಕಾದ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾದರು.ಇದಾದ ನಂತರ ಏಳು ಅಪರಾಧಿಗಳಿಗೆ ಮರಣ ದಂಡನೆಯನ್ನು ವಿಧಿಸಲಾಯಿತು.

2000 ರಲ್ಲಿ,ರಾಜೀವ್ ಗಾಂಧಿ ಅವರ ಪತ್ನಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮಧ್ಯಸ್ಥಿಕೆಯ ಮೇರೆಗೆ ನಳಿನಿ ಶ್ರೀಹರನ್ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಸಲಾಯಿತು. 2008 ರಲ್ಲಿ ರಾಜೀವ್ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವೆಲ್ಲೂರು ಜೈಲಿನಲ್ಲಿ ಭೇಟಿಯಾದರು.

ಇದನ್ನೂ ಓದಿ : Weight Loss Tips: ಪಪ್ಪಾಯಿಯನ್ನು ಈ ರೀತಿ ಸೇವಿಸಿದ್ರೆ ಕೇವಲ 7 ದಿನಗಳಲ್ಲಿ ಇಳಿಯುತ್ತೆ ತೂಕ!

2014ರಲ್ಲಿ ಇನ್ನೂ ಆರು ಅಪರಾಧಿಗಳ ಶಿಕ್ಷೆಯನ್ನು ಕೂಡ ತಗ್ಗಿಸಲಾಯಿತು.ಅದೇ ವರ್ಷ,ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರನ್ನು ಬಿಡುಗಡೆ ಮಾಡಲು ಕ್ರಮಗಳನ್ನು ತೆಗೆದುಕೊಂಡರು.ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ 'ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಉಳಿದ ಹಂತಕರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್‌ನ ನಿರ್ಧಾರವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಸಂಪೂರ್ಣವಾಗಿ ತಪ್ಪಾಗಿದೆ. ಕಾಂಗ್ರೆಸ್ ಪಕ್ಷವು ಅದನ್ನು ಸ್ಪಷ್ಟವಾಗಿ ಟೀಕಿಸುತ್ತದೆ ಮತ್ತು ಸಂಪೂರ್ಣವಾಗಿ ಅಸಮರ್ಥನೀಯವಾಗಿದೆ. ಇದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ.”ಎಂದು ಹೇಳಿದ್ದಾರೆ.

ನಳಿನಿ ಶ್ರೀಹರನ್ ಅವರ ಸಹೋದರ ಬಾಕಿನಾಥನ್ ಮಾತನಾಡಿ,ಅಪರಾಧಿಗಳು ಈಗಾಗಲೇ 33 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಮತ್ತು ಸಾಕಷ್ಟು ನೋವು ಅನುಭವಿಸಿದ್ದಾರೆ.'ಮಾನವೀಯ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರ ಬಿಡುಗಡೆಯನ್ನು ವಿರೋಧಿಸುವವರು ಭಾರತದ ಕಾನೂನನ್ನು ಗೌರವಿಸಬೇಕು" ಎಂದು ಬಕಿನಾಥನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News