ನವದೆಹಲಿ: ಪಂಜಾಬ್‌ನ ಮಾಜಿ ಬಿಜೆಪಿ ಮುಖ್ಯಸ್ಥ ಕಮಲ್ ಶರ್ಮಾ ಅವರು ಭಾನುವಾರ ಫಿರೋಜ್‌ಪುರ ನಗರದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.



COMMERCIAL BREAK
SCROLL TO CONTINUE READING

ಸಾವಿಗೆ ಒಂದು ಗಂಟೆ ಮೊದಲು ದೀಪಾವಳಿ ಹಬ್ಬದ ಪ್ರಯುಕ್ತ ಫೇಸ್‌ಬುಕ್ ಪೋಸ್ಟ್‌ನಲ್ಲಿ ಶುಭಾಶಯ ಕೋರಿದ್ದಾರೆ. ಉದ್ಯಾನವನದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಏಕಾಏಕಿ ಕುಸಿದುಬಿದ್ದರು ಎನ್ನಲಾಗಿದೆ.


ತದನಂತರ ಕಮಲ್ ಶರ್ಮಾ ಅವರನ್ನು ಹತ್ತಿರದ ಅಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಹೆಂಡತಿ ಮತ್ತು ಇಬ್ಬರು ಮಕ್ಕಳಿದ್ದಾರೆ.