ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟೀಸ್ ಅರುಣ್ ಮಿಶ್ರಾ ನೇಮಕ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಅವರು ಕಳೆದ ವರ್ಷ ಸೆಪ್ಟೆಂಬರ್ 3 ರಂದು ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾಗಿದ್ದರು.
ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಅವರು ಕಳೆದ ವರ್ಷ ಸೆಪ್ಟೆಂಬರ್ 3 ರಂದು ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾಗಿದ್ದರು.
ಇದನ್ನೂ ಓದಿ: PM Kusum: ರೈತರ ಆದಾಯದ ಮೇಲೆ ವಂಚಕರ ಕಣ್ಣು, ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರಿಸಿದ ಸರ್ಕಾರ
2014 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಮೂರ್ತಿ ಮಿಶ್ರಾ ಅವರು ರಾಜಸ್ಥಾನ ಮತ್ತು ಕಲ್ಕತ್ತಾ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಯಾಗಿದ್ದರು.ಎನ್‌ಎಚ್‌ಆರ್‌ಸಿ (National Human Rights Commission)ಯ ಅಧ್ಯಕ್ಷರಾಗಿ, ಅವರ ಅಧಿಕಾರಾವಧಿ ಐದು ವರ್ಷಗಳವರೆಗೆ ಅಥವಾ ಅವರು 70 ನೇ ವಯಸ್ಸನ್ನು ತಲುಪುವವರೆಗೆ ಚಾಲ್ತಿಯಲ್ಲಿರುತ್ತದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪಾಧ್ಯಕ್ಷ, ಹರಿವಾನ್ಶ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಒಳಗೊಂಡ ಉನ್ನತ-ಸಮಿತಿಯ ಶಿಫಾರಸ್ಸಿನ ಮೇರೆಗೆ ನ್ಯಾಯಮೂರ್ತಿ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಲಸಿಕಾ ನೀತಿ ಕುರಿತು ಸುಪ್ರೀಂ ಕೋರ್ಟ್ ಗರಂ
ಆದಾಗ್ಯೂ, ಖರ್ಗೆ ಅವರು ಸಮಿತಿಯ ಶಿಫಾರಸ್ಸಿನ ವಿಚಾರದಲ್ಲಿ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದಾರೆ, ಪರಿಶಿಷ್ಟ ಜಾತಿ,ಮತ್ತು ಪರಿಶಿಷ್ಟ ಪಂಗಡದ ಸದಸ್ಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಸಮುದಾಯಗಳಿಗೆ ಸೇರಿದ ವ್ಯಕ್ತಿಯನ್ನು ಎನ್‌ಎಚ್‌ಆರ್‌ಸಿ ಅಧ್ಯಕ್ಷರಾಗಿ ಅಥವಾ ಎನ್‌ಎಚ್‌ಆರ್‌ಸಿ ಸದಸ್ಯರಾಗಿ ನೇಮಕ ಮಾಡುವಂತೆ ಕೋರಿದ್ದರು.
ಇದನ್ನೂ ಓದಿ: ನೌಕರರ ಡಬ್ಬಲ್ ಧಮಾಕ.! ವೇತನ ಏರಿಕೆಗೆ ಕೂಡಿ ಬಂತು ಕಾಲ.! 30 ರೊಳಗೆ ಈ ಕೆಲಸ ಮುಗಿಸಿ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ