KCR hospitalized : ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಬಾತ್ ರೂಂನಲ್ಲಿ ಜಾರಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಸೊಂಟ ಭಾಗದಲ್ಲಿ ಲಘು ಬಿರುಕು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಅವರನ್ನು ಯಶೋದಾ ಆಸ್ಪತ್ರೆಗೆ ಸಾಗಿಸಲಾಯಿತು. ಸದ್ಯ ಯಶೋದಾ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ತಡರಾತ್ರಿ ಎರಡೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಹೌದು.. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಸಿಎಂ ಕೆಸಿಆರ್ ಪ್ರಗತಿ ಭವನದಿಂದ ನೇರವಾಗಿ ಫಾರ್ಮ್‌ಹೌಸ್‌ಗೆ ತೆರಳಿದ್ದರು. ಅಂದಿನಿಂದ ಅವರು ಅಲ್ಲೇ ಉಳಿದುಕೊಂಡಿದ್ದರು. ರಾತ್ರಿ ಎರಡೂವರೆ ಗಂಟೆಗೆ ಸುಮಾರಿಗೆ ಬಾತ್ ರೂಂನಲ್ಲಿ ಜಾರಿ ಬಿದ್ದಿದ್ದರು. ಈ ವೇಳೆ ಅವರ ಕಾಲಿಗೆ ಗಾಯವಾಗಿತ್ತು. ಕೂಡಲೇ ಅವರನ್ನು ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೆ, ಸೊಂಟದ ಮೂಳೆಗೆ ಗಾಯವಾಗಿದೆ.
BRS supremo KCR Garu sustained a minor injury and is currently under expert care in the hospital. With the support and well-wishes pouring in, Dad will be absolutely fine soon.
Grateful for all the love 🙏🏼— Kavitha Kalvakuntla (@RaoKavitha) December 8, 2023
ಇದನ್ನೂ ಓದಿ: ಮುರುಘಾ ಶರಣರಿಗೆ ಅಧಿಕಾರ ಹಸ್ತಾಂತರ
ಇನ್ನು ಕೆಸಿಆರ್ ಗಾಯದ ಬಗ್ಗೆ ಯಶೋದಾ ಆಸ್ಪತ್ರೆಯ ಮೂಲಗಳು ಪ್ರತಿಕ್ರಿಯಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಾಗಿಲ್ಲ ಎನ್ನಲಾಗಿದೆ. ಅಲ್ಲದೆ ಅವರಿಗೆ ಹಿಪ್ ರಿಪ್ಲೇಸ್ ಮೆಂಟ್ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದ್ದು, ಸಂಜೆ ಸರ್ಜರಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಇನ್ನು ಆಸ್ಪತ್ರೆಯಲ್ಲಿ ದಾಖಲಾಗಿರುವ ಕೆಸಿಆರ್ ಅವರನ್ನು ಬಿಆರ್‌ಎಸ್‌ನ ಎಲ್ಲಾ ಪ್ರಮುಖ ನಾಯಕರು ಭೇಟಿ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಕೆಸಿಆರ್ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಎಂಎಲ್ ಸಿ ಕವಿತಾ, ಕೆಸಿಆರ್ ಅವರು ಚೆನ್ನಾಗಿದ್ದಾರೆ, ಭಯ ಪಡುವ ಅಗತ್ಯವಿಲ್ಲ ಎಂದು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.