ಬೆಂಗಳೂರು: ಕೇಂದ್ರ ಮಾಜಿ ಸಚಿವ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಸೋಮವಾರ ನಿಧನ ಹೊಂದಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಜುಲೈ 18 ರಂದು ಅವರ ನಿವಾಸದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾಗ ಬಿದ್ದು ತಲೆಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ಮಂಗಳೂರಿನ ಯೆನೇಪೋಯಾ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಂದಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇದನ್ನೂ ಓದಿ: Deadly Virus: ನಿಫಾ ವೈರಸ್ ವಕ್ಕರಿಸಿದರೆ ಪ್ರಾಣಕ್ಕೆ ಕುತ್ತು ಗ್ಯಾರಂಟಿ..!
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.
ಸರಳ,ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು.
ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿಕೋರುವೆ. pic.twitter.com/p3txQfO6qj— Siddaramaiah (@siddaramaiah) September 13, 2021
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದೆರಡು ದಿನಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ್ದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ದೂರವಾಣಿ ಕರೆ ಮಾಡಿ ಫರ್ನಾಂಡಿಸ್ ಕುಟುಂಬದವರೊಂದಿಗೆ ಮಾತನಾಡಿ ಹಿರಿಯ ನಾಯಕನ ಆರೋಗ್ಯ ವಿಚಾರಿಸಿದ್ದರು.
ಇದನ್ನೂ ಓದಿ: ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ: ಸಿದ್ದರಾಮಯ್ಯ ಆರೋಪ
My heartfelt condolences to the family and friends of Shri Oscar Fernandes Ji.
It is a personal loss for me. He was a guide and mentor to many of us in the Congress Party.He will be missed and fondly remembered for his contributions. pic.twitter.com/NZVD592GSJ
— Rahul Gandhi (@RahulGandhi) September 13, 2021
1941ರ ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಯುಪಿಎ ನೇತೃತ್ವದ ಆಡಳಿತಾವಧಿಯಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರು ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. 1980ರಿಂದ 1996ರವರೆಗೆ ಒಟ್ಟು 5 ಬಾರಿ(1980, 1984, 1989, 1991 & 1996)ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದ ಅವರು 1998 ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು. ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.