ಪುಲ್ವಾಮಾದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ನಾಲ್ವರು ಯೋಧರು ಸಾವು
ಇಂದು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರು ದಾಳಿ ನಡೆಸಿದ್ದು ಓರ್ವ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಪುಲ್ವಾಮಾ: ಇತ್ತೀಚೆಗಷ್ಟೇ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾದ ಬೆನ್ನಲ್ಲೇ ಮತ್ತೆ ಉಗ್ರರ ಅಟ್ಟಹಾಸ ಮೆರೆದಿದ್ದಾರೆ.
ಇಂದು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರು ದಾಳಿ ನಡೆಸಿದ್ದು ಓರ್ವ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಪುಲ್ವಾಮಾದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸೋಮವಾರ ಬೆಳಿಗ್ಗೆ ಸೇನೆಯ 55ಆರ್ಆರ್, ಸಿಆರ್ಪಿಎಫ್ ಮತ್ತು ಎಸ್ಒಜಿ ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂದರ್ಭದಲ್ಲಿ ಪಿಂಗ್ಲಾನ್ ನಗರದಲ್ಲಿ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾಗ ಜೈಷ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಹುತಾತ್ಮರಾದವರನ್ನು ಮೇಜರ್ ಡಿ.ಎಸ್.ದೊಂಡಿಯಲ್, ಹೆಡ್ ಕಾನ್ಸ್ಟೇಬಲ್ ಸೇವ್ ರಾಮ್, ಅಜಯ್ ಕುಮಾರ್ ಮತ್ತು ಹರಿ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಯೋಧ ಗುಲ್ಜಾರ್ ಮೊಹಮ್ಮದ್ ತೀವ್ರವಾಗಿ ಗಾಯಗೊಂಡಿದ್ದು, ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.