ತಾಯಿ ಮೃತಪಟ್ಟರೂ ಸಹ ಪಿಂಚಣಿ ಹಣಕ್ಕಾಗಿ ಪಾಪಿ ಮಕ್ಕಳು ಮೃತ ದೇಹವನ್ನ ಐದು ತಿಂಗಳುಗಳ ಕಾಲ ಬಚ್ಚಿಟ್ಟಿದ್ದರಂತೆ. ಈ ವಿಷಯ ತಿಳಿದ ವ್ಯಕ್ತಿಯೊಬ್ಬರು 100 ನಂಬರ್ಗೆ ಕಾಲ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದರಂತೆ.

Uttar pradesh: ʼಹಣ ಎಂದರೆ ಹೆಣ ಕೂಡ ಬಾಯಿ ಬಿಡುತ್ತೆವೆʼ ಅನ್ನೋ ಗಾದೆ ಮಾತಿನಂತೆ ಇಂದು ಝಣ.. ಝಣ.. ಕಾಂಚಾಣದ ಮುಂದೆ ಎಲ್ಲಗೂ ಗೌಣವಾಗುತ್ತಿವೆ. ಹಣದ ಮುಂದೆ ಸಂಬಂಧಗಳಿಗೂ ಬೆಲೆ ಇಲ್ಲದಂತಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯೊಂದು ಪ್ರತಿಯೊಬ್ಬರ ಕಣ್ಣಲ್ಲಿ ನೀರು ತರಿಸುವಂತಿದೆ. ಹೌದು, ತಂದೆಯ ಪಿಂಚಣಿ ಹಣಕ್ಕಾಗಿ ತಾಯಿಯ ಮೃತ ದೇಹವನ್ನ ಮಕ್ಕಳೇ ಐದು ತಿಂಗಳ ಕಾಲ ಬಚ್ಚಿಟ್ಟಿರುವ ಅಮಾನವೀಯ ಘಟನೆ ನಡೆದಿದೆ.
2018ರ ಮೇ ತಿಂಗಳಿನಲ್ಲಿ ನಡೆದಿದ್ದ ಈ ಘಟನೆ ಇದೀಗ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಂದು ಸಖತ್ ವೈರಲ್ ಆಗಿದ್ದ ಈ ಸುದ್ದಿ ಹಣಕ್ಕಾಗಿ ಮನುಷ್ಯ ಎಂತಹ ಕೀಳುಮಟ್ಟಕ್ಕೂ ಇಳಿಯುತ್ತಾನೆ ಅನ್ನೋದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ವಾರಣಾಸಿಯ ಕಬೀರ್ ನಗರದ ಅಮರಾವತಿ ದೇವಿ (70) ಎಂಬುವರು ಮೃತಪಟ್ಟಿದ್ದರು. ತಾಯಿ ಮೃತಪಟ್ಟರೂ ಸಹ ನಾಲ್ವರು ಪುತ್ರರು ಹಾಗೂ ಅವರ ಪತ್ನಿಯರು ಪಿಂಚಣಿ ಹಣ ಪಡೆಯುವುದಕ್ಕಾಗಿ ಈ ವಿಷಯವನ್ನು ಬಚ್ಚಿಟ್ಟಿದ್ದರು.
ತಾಯಿ ಮೃತಪಟ್ಟರೂ ಸಹ ಪಿಂಚಣಿ ಹಣಕ್ಕಾಗಿ ಪಾಪಿ ಮಕ್ಕಳು ಮೃತ ದೇಹವನ್ನ ಐದು ತಿಂಗಳುಗಳ ಕಾಲ ಬಚ್ಚಿಟ್ಟಿದ್ದರಂತೆ. ಈ ವಿಷಯ ತಿಳಿದ ವ್ಯಕ್ತಿಯೊಬ್ಬರು 100 ನಂಬರ್ಗೆ ಕಾಲ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದ. ಅಮರಾವತಿ ದೇವಿಯವರು ಸಾವನ್ನಪ್ಪಿದ್ದರೂ ಅವರ ಮಕ್ಕಳು ನೆರೆಹೊರೆಯವರಿಗೆ ಅನುಮಾನ ಬಾರದಂತೆ ಮೃತ ದೇಹವನ್ನ ಬಚ್ಚಿಟ್ಟಿದ್ದಾರೆ ಅನ್ನೋ ಮಾಹಿತಿ ನೀಡಿದ್ದರು. ನಂತರ ತನಿಖೆ ಕೈಗೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತು ಅಂತಾ ಭುಲ್ಪುರ್ ಸಂಚಾರ ಪೊಲೀಸ್ ಅಧಿಕಾರಿ ಎ.ಪಿ.ಸಿಂಗ್ ತಿಳಿಸಿದ್ದಾರೆ.
ಅಂದಹಾಗೆ ಮೃತ ಅಮರಾವತಿ ದೇವಿಯವರ ಪತಿ ಕಸ್ಟಮ್ಸ್ ಇಲಾಖೆಯಲ್ಲಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪತಿ ಸಾವನ್ನಪ್ಪಿದ್ದರಿಂದ ಅಮರಾವತಿ ದೇವಿಯವರಿಗೆ ಪ್ರತಿ ತಿಂಗಳು ಪಿಂಚಣಿ ಬರುತ್ತಿತ್ತು. ಆದರೆ ತಾಯಿ ಮೃತಪಟ್ಟ ಬಳಿಕ ಈ ಪಿಂಚಣಿ ಹಣದ ಬಗ್ಗೆ ಮಕ್ಕಳಿಗೆ ಚಿಂತೆಯಾಗಿದೆ. ಹೀಗಾಗಿ ನಾಲ್ವರು ಪುತ್ರರು ಆ ಪಿಂಚಣಿ ಹಣ ಪಡೆಯಲು ತಾಯಿಯ ಸಾವನ್ನಪ್ಪಿದ ವಿಷಯವನ್ನ ನೆರೆಹೊರೆಯವರಿಗೆ ತಿಳಿಸದೆ, ಮನೆಯಲ್ಲಿಯೇ ಮೃತದೇವನ್ನು ಇಟ್ಟುಕೊಂಡಿದ್ದರಂತೆ. ತಾಯಿ ಸಾವನ್ನಪ್ಪುವ ಮುನ್ಮವೇ ಮಕ್ಕಳು ಐದು ಖಾಲಿ ಚೆಕ್ಗಳಿಗೆ ಸಹಿ ಹಾಕಿಸಿಕೊಂಡಿರುವ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ.
ತಾಯಿಯ ಮೃತದೇಹವು ಕೊಳೆಯದಂತೆ ಅದಕ್ಕೆ ರಾಸಾಯನಿಕವನ್ನು ಸಿಂಪಡಿಸಿದ್ದಾರೆ. ನೆರೆಹೊರೆಯವರಿಗೆ ವಾಸನೆ ಬಾರದಂತೆ ಮನೆಯಲ್ಲಿ ಲೋಬಾನ ಹಾಕುತ್ತಿದ್ದರಂತೆ. ಆರೋಪಿಗಳಿಗೆ ಅವರ ಪತ್ನಿಯರು ಸಹ ಸಾಥ್ ನೀಡಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಕ್ಕಳಿಗೆ ಛಿಮಾರಿ ಹಾಕಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಅಲ್ಲದೇ ಈ ಹೀನಕೃತ್ಯದಲ್ಲಿ ಭಾಗಿಯಾದ ಮಕ್ಕಳು ಮತ್ತು ಅವರ ಪತ್ನಿಯರ ವಿರುದ್ಧ ಐಪಿಸಿ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದರಂತೆ. ಅಂದು ನಡೆದಿದ್ದ ಈ ಪ್ರಕರಣ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹಣಕ್ಕಾಗಿ ಪಾಪಿ ಮಕ್ಕಳು ಮಾಡಿರುವ ಕೃತ್ಯಕ್ಕೆ ನೆಟಿಜನ್ಸ್ ಕಿಡಿಕಾರಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.