Building collapses in Mumbai: ಮುಂಬೈನ ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ

Building collapses in Mumbai Kurla:  ಮಹಾರಾಷ್ಟ್ರದ ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ.

Written by - Yashaswini V | Last Updated : Jun 28, 2022, 06:50 AM IST
  • ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದೆ
  • ಕಟ್ಟಡ ಕುಸಿತದಿಂದ ಅವಶೇಷಗಳಡಿ ಸಿಲುಕಿದ್ದ ಏಳು ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ
  • ಆದರೆ ಇನ್ನೂ 20-25 ಮಂದಿ ಕಟ್ಟಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
Building collapses in Mumbai: ಮುಂಬೈನ ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ title=
Building collapses in Mumbai Kurla

ಮುಂಬೈ ಕುರ್ಲಾದಲ್ಲಿ ಕಟ್ಟಡ ಕುಸಿತ: ಮಹಾರಾಷ್ಟ್ರದ ಮುಂಬೈನ ಕುರ್ಲಾ ನಾಯ್ಕ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು ಹಲವು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಘಟನೆ ಕುರಿತಂತೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಅವಶೇಷಗಳಡಿ ಸಿಲುಕಿದ್ದ 7 ಮಂದಿ ರಕ್ಷಣೆ:
ಪೊಲೀಸರ ಪ್ರಕಾರ, ಕಟ್ಟಡ ಕುಸಿತದಿಂದ ಅವಶೇಷಗಳಡಿ ಸಿಲುಕಿದ್ದ ಏಳು ಜನರನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಆದರೆ ಇನ್ನೂ 20-25 ಮಂದಿ ಕಟ್ಟಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರಿಹಾರ ಕಾರ್ಯದಲ್ಲಿ ಸಹಾಯ ಮಾಡಲು ಎನ್‌ಡಿಆರ್‌ಎಫ್ ತಂಡ ಸಹ ಸ್ಥಳದಲ್ಲಿ ಬೀಡು ಬಿಟ್ಟಿದೆ. ಎನ್‌ಡಿಆರ್‌ಎಫ್ ಸಿಬ್ಬಂದಿ ತಮ್ಮ ಭಾರೀ ಉಪಕರಣಗಳೊಂದಿಗೆ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ- ಕೇಂದ್ರದಿಂದ ಶೀಘ್ರವೇ ‘ಒಂದು ರಾಷ್ಟ್ರ, ಒಂದು ಡಯಾಲಿಸಿಸ್ ಯೋಜನೆ': ಮನ್ಸುಖ್ ಮಾಂಡವಿಯಾ

ಅಪಘಾತದ ನಂತರ ಮಹಾರಾಷ್ಟ್ರ ಸಂಪುಟ ಸಚಿವ ಆದಿತ್ಯ ಠಾಕ್ರೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಇಲ್ಲಿ 4 ಬಹುಮಹಡಿ ಕಟ್ಟಡಗಳಿದ್ದು, ಶಿಥಿಲಗೊಂಡಿವೆ. ಈ ಕಟ್ಟಡಗಳಲ್ಲಿ ವಾಸಿಸುತ್ತಿರುವವರಿಗೆ ಕಟ್ಟಡ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಸೂಚನೆಯನ್ನು ಗಂಭೀರವಾಗಿ ಸ್ವೀಕರಿಸದೆ ಅವರು ಅಲ್ಲಿಯೇ ವಾಸಿಸುತ್ತಿದ್ದರು. ಇದೀಗ ಮಂಗಳವಾರ ಅಂದರೆ ಇಂದು ಈ 4 ಕಟ್ಟಡಗಳನ್ನು ಖಾಲಿ ಮಾಡಿ ನೆಲಸಮ ಮಾಡಲಾಗುತ್ತಿದ್ದು, ಮುಂದೆ ಇಂತಹ ಅವಘಡ ಸಂಭವಿಸದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ- ಮಹಾರಾಷ್ಟ್ರ ರಾಜಕೀಯಕ್ಕಿದೆಯೇ ದಾವೂದ್‌ ನಂಟು! ಸಂಚಲನ ಮೂಡಿಸಿದ ಶಿಂಧೆ ಟ್ವೀಟ್‌

ಈ ಕಟ್ಟಡಕ್ಕೆ ಬಿಎಂಸಿ ನೋಟಿಸ್ ನೀಡಿದಾಗಲೇ ಅದರ ಗಂಭೀರತೆಯನ್ನು ಅರಿತು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಕಟ್ಟಡವನ್ನು ತೆರವು ಮಾಡಬೇಕಿತ್ತು.  ಹೀಗೆ ಮಾಡಿದ್ದರೆ ಅಪಘಾತವಾದಾಗ ಜನರಿಗೆ ಯಾವುದೇ ತೊಂದರೆಯಾಗುತ್ತಿರಲಿಲ್ಲ. ಇಂತಹ ಶಿಥಿಲಗೊಂಡ ಕಟ್ಟಡಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಭವಿಷ್ಯದಲ್ಲಿ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News