ಮುಂಬೈ: ಮುಂಬೈನ ಡೊಂಗ್ರಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 40 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಮೂಲಗಳು ತಿಳಿಸಿವೆ. 


COMMERCIAL BREAK
SCROLL TO CONTINUE READING

ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಎನ್‌ಡಿಆರ್‌ಎಫ್ ನ 5ನೇ ಬೆಟಾಲಿಯನ್‌ನ ಎರಡು ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ನಿರತವಾಗಿವೆ. ಅಗ್ನಿಶಾಮಕ ದಳದ ತಂಡಗಳು ಕೂಡ ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. 



ಈ ಕಟ್ಟಡ ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ್ದು ಎನ್ನಲಾಗಿದೆ.