100 units free electricity: ರಾಜಸ್ಥಾನದಲ್ಲಿ 100 ಯುನಿಟ್ ವಿದ್ಯುತ್ ಉಚಿತ- ಅಶೋಕ್ ಗೆಹ್ಲೋಟ್

Free electricity up to 100 units: ತಿಂಗಳಿಗೆ 100 ಯೂನಿಟ್‍ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ. ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

Written by - Puttaraj K Alur | Last Updated : Jun 1, 2023, 04:36 PM IST
  • ರಾಜಸ್ಥಾನದಲ್ಲಿ ಪ್ರತಿ ಮನೆಗೆ 100 ಯೂನಿಟ್ ವಿದ್ಯುತ್ ಉಚಿತವೆಂದ ಸಿಎಂ ಅಶೋಕ್ ಗೆಹ್ಲೋಟ್
  • ತಿಂಗಳಿಗೆ 100 ಯೂನಿಟ್‍ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ
  • ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತ
100 units free electricity: ರಾಜಸ್ಥಾನದಲ್ಲಿ 100 ಯುನಿಟ್ ವಿದ್ಯುತ್ ಉಚಿತ- ಅಶೋಕ್ ಗೆಹ್ಲೋಟ್  title=
100 ಯೂನಿಟ್ ವಿದ್ಯುತ್ ಉಚಿತ!

ನವದೆಹಲಿ: ರಾಜಸ್ಥಾನದಲ್ಲಿ ಪ್ರತಿಯೊಂದು ಮನೆಗೆ ಉಚಿತವಾಗಿ 100 ಯೂನಿಟ್ ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.

‘ತಿಂಗಳಿಗೆ 100 ಯೂನಿಟ್‍ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ. ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಎಷ್ಟೇ ಬಿಲ್ ಬಂದಲೂ ಮೊದಲ 100 ಯೂನಿಟ್ ವಿದ್ಯುತ್‍ಗೆ ಶುಲ್ಕ ಪಾವತಿಸಬೇಕಾಗಿಲ್ಲ’ ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

‘ತಿಂಗಳಿಗೆ 200 ಯೂನಿಟ್‍ವರೆಗೆ ವಿದ್ಯುತ್ ಬಳಸುವ ಮಧ್ಯಮ ವರ್ಗದ ಜನರಿಗೆ ಮೊದಲ 100 ಯೂನಿಟ್ ಉಚಿತವಾಗಲಿದೆ. ಜೊತೆಗೆ 200 ಯೂನಿಟ್‍ಗಳವರೆಗೆ ಸ್ಥಿರ ಶುಲ್ಕ, ಇಂಧನ ಸರ್ಚಾರ್ಜ್ ಮತ್ತು ಇರತ ಎಲ್ಲಾ ಶುಲ್ಕಗಳನ್ನು ಮನ್ನಾ ಮಾಡಲಾಗುವುದು. ಸರ್ಕಾರವೇ ಈ ಶುಲ್ಕವನ್ನು ಪಾವತಿಸಲಿದೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Wrestler Protest: ಬ್ರಿಜ್ ಭೂಷಣ್ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಕ್ರಮ ಕೈಗೊಳ್ಳುತ್ತದೆಯೇ?

ರಾಜಸ್ಥಾನದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಹಣದುಬ್ಬರ ಪರಿಹಾರ ಶಿಬಿರಗಳಲ್ಲಿ ವ್ಯಕ್ತವಾದ ಅಭಿಪ್ರಾಯದ ಆಧಾರದಲ್ಲಿ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ಗೆಹ್ಲೋಟ್ ತಿಳಿಸಿದ್ದಾರೆ. ಈ ಶಿಬಿರಗಳಲ್ಲಿ 10 ಪ್ರಮುಖ ಯೋಜನೆಗಳಿಗೆ ಜನರಿಂದ ನೋಂದಣಿ ಮಾಡಿಸಲಾಗುತ್ತಿದೆ. ಇದರಲ್ಲಿ ಉಚಿತ ವಿದ್ಯುತ್ ಯೋಜನೆಯೂ ಒಂದಾಗಿದೆ’ ಎಂದು ಅವರು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಮಂಡಿಸಿದ್ದ ಬಜೆಟ್‍ನಲ್ಲಿ ಗೆಹ್ಲೋಟ್ ಅವರು ತಿಂಗಳಿಗೆ 100 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದರು. ಈ ವರ್ಷದ ಕೊನೆಯಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Wrestler Protest: ತನಿಖೆ ಬಳಿಕ ಬ್ರಿಜ್ ಭೂಷಣ್ ವಿರುದ್ಧ ಕ್ರಮ - ರಾಜನಾಥ್ ಸಿಂಗ್

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಚುನಾವಣೆ ಗೆಲ್ಲುವ ಸಲುವಾಗಿ ಕಾಂಗ್ರೆಸ್ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳು ದೇಶವನ್ನು ದಿವಾಳಿಯ ಅಂಚಿನತ್ತ ಕೊಂಡೊಯ್ಯಲಿವೆ ಎಂದು ಅವರು ಆರೋಪಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News