₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ರಾಹುಲ್ ಗಾಂಧಿ
Chhattisgarh Assembly polls 2023: ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದ್ದ ರಾಹುಲ್, ಇದೀಗ ರಾಜ್ಯದ ಜನರಿಗೆ ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಮಹತ್ವದ ಭರವಸೆ ನೀಡಿದ್ದಾರೆ.
ನವದೆಹಲಿ: ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಬರಪೂರ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದ್ದ ರಾಹುಲ್, ಇದೀಗ ರಾಜ್ಯದ ಜನರಿಗೆ ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಮಹತ್ವದ ಭರವಸೆ ನೀಡಿದ್ದಾರೆ.
ರಾಜ್‌ನಂದಗಾಂವ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಹುಲ್, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಭೂರಹಿತ ಗ್ರಾಮೀಣ ಕಾರ್ಮಿಕರಿಗೆ ವರ್ಷಕ್ಕೆ 10 ಸಾವಿರ ರೂ. ಸಹಾಯಧನ ನೀಡುವುದಾಗಿ’ ಅವರು ಇದೇ ವೇಳೆ ತಿಳಿಸಿದ್ದಾರೆ.
ಇದನ್ನೂ ಓದಿ: “ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ”: ಸಿಎಂ ಸಿದ್ದರಾಮಯ್ಯ
BJP vs Congress: ಕಾಂಗ್ರೆಸ್‍ನಲ್ಲಿ ಸರ್ವಾಧಿಕಾರಿ ಡಿ.ಕೆ.ಶಿವಕುಮಾರ್ ದರ್ಬಾರ್..!
ಕೇವಲ 15 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಂಡಿದ್ದ ಕಮಲ ಪಕ್ಷವು ಕಾಂಗ್ರೆಸ್ ಎದುರು ದೊಡ್ಡ ಮುಖಭಂಗ ಅನುಭವಿಸಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಜಯ ಗಳಿಸಿ ಬಹುಮತದ ಸರ್ಕಾರ ರಚಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಮತದಾರ ಯಾರ ಕೊರಳಿಗೆ ವಿಜಯಮಾಲೆ ಹಾಕುತ್ತಾನೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.