ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ: ಈ ದಿನದೊಳಗೆ ಅರ್ಜಿ ಸಲ್ಲಿಸಿರಿ
Free sewing machine: ಹೊಲಿಗೆ ಯಂತ್ರ ಖರೀದಿಸಿದ ನಂತರ ಕೇಂದ್ರವು 1 ಲಕ್ಷ ರೂ.ಗಳ ಸಾಲ ನೀಡುತ್ತದೆ. ಈ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡಬಹುದು. ಸಾಲ ಮರುಪಾವತಿ ಮಾಡಿದ ನಂತರ ನೀವು ಇನ್ನೂ ಎರಡು ಲಕ್ಷದವರೆಗೆ ಸಾಲ ಪಡೆಯಬಹುದು.
Free sewing machine: ಕೇಂದ್ರದಲ್ಲಿ 3ನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರ ರಚನೆಯಾಗುವುದರೊಂದಿಗೆ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುತ್ತಿದೆ. ಈ ಪೈಕಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ಕೂಡ ಇದೆ. ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಮಹಿಳಾ ಸಬಲೀಕರಣದ ಉದ್ದೇಶದಿಂದ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರವು ʼಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆʼ ಎಂಬ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ ಹೊಲಿಗೆ ಯಂತ್ರವನ್ನು ಖರೀದಿಸಲು ಒಬ್ಬ ಮಹಿಳೆಗೆ 15,000 ರೂ.ಗಳನ್ನು ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದಲ್ಲದೆ ಸರ್ಕಾರವು ಒಂದು ವಾರದ ಡಿಜಿಟಲ್ ತರಬೇತಿಯನ್ನು ಸಹ ಒದಗಿಸುತ್ತದೆ. ಈ ಸಮಯದಲ್ಲಿ ತರಬೇತಿಗೆ ಹಾಜರಾದ ಮಹಿಳೆಯರಿಗೆ ದಿನಕ್ಕೆ 500 ರೂ. ಪಾವತಿಸಲಾಗುತ್ತದೆ.
ಇದನ್ನೂ ಓದಿ: ಬೆಂಗಳೂರಿನ ಈ ಸುಂದರಿ ಕಂಡ್ರೆ ಪ್ಯಾನ್ ಇಂಡಿಯಾ ನಟಿಯರಿಗೆ ನಡುಕ ಹುಟ್ಟುತ್ತೆ..! ಅಬ್ಬಬ್ಬಾ... ಈಕೆ ಸೌಂದರ್ಯವೇ ಒಂದು ಹಬ್ಬ..
ಹೊಲಿಗೆ ಯಂತ್ರ ಖರೀದಿಸಿದ ನಂತರ ಕೇಂದ್ರವು 1 ಲಕ್ಷ ರೂ.ಗಳ ಸಾಲ ನೀಡುತ್ತದೆ. ಈ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡಬಹುದು. ಸಾಲ ಮರುಪಾವತಿ ಮಾಡಿದ ನಂತರ ನೀವು ಇನ್ನೂ ಎರಡು ಲಕ್ಷದವರೆಗೆ ಸಾಲ ಪಡೆಯಬಹುದು. ಇದನ್ನು 30 ತಿಂಗಳಲ್ಲಿ ಪಾವತಿಸಬೇಕು. ಅಂಗಡಿ ತೆರೆಯಲು ಹೊಲಿಗೆ ವಸ್ತುಗಳನ್ನು ಖರೀದಿಸುವವರಿಗೆ ಕೇಂದ್ರ ಸರ್ಕಾರ ಈ ಸಾಲವನ್ನು ನೀಡುತ್ತಿದೆ. ಈ ಸಾಲಗಳ ಮೇಲಿನ ಬಡ್ಡಿ ತುಂಬಾ ಕಡಿಮೆ ಇರುತ್ತದೆ. ಇದಲ್ಲದೆ ಕೇಂದ್ರವು ಸಾಲಕ್ಕೆ ಅನ್ವಯವಾಗುವ ಕ್ರೆಡಿಟ್ ಗ್ಯಾರಂಟಿ ಶುಲ್ಕಗಳನ್ನು ಪಾವತಿಸುತ್ತದೆ. ಮಹಿಳೆಯರು ಮಾತ್ರವಲ್ಲದೆ ಪುರುಷರು ಸಹ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಲಾಭವನ್ನು ಹೇಗೆ ಪಡೆಯುವುದು ಎಂಬುದರ ಬಗ್ಗೆ ತಿಳಿಯಿರಿ.
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಹತೆ: ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು. ಈಗಾಗಲೇ ಹೊಲಿಗೆ ಮಾಡುತ್ತಿರುವವರು ಮಾತ್ರ ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ʼಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆʼ ಅಡಿ ಟೈಲರ್ ಆಗಿ ಕೆಲಸ ಮಾಡುವ ಯಾವುದೇ ವ್ಯಕ್ತಿಯು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
ಇದನ್ನೂ ಓದಿ: ಒಂದು ಮಗುವಿನ ತಾಯಿಯಾದ್ರೂ ಇನ್ನೂ ಸ್ವರ್ಣಸುಂದರಿ ರಾಧಿಕಾ ಕುಮಾರಸ್ವಾಮಿ! ಇವರ ನಿಜವಾದ ವಯಸ್ಸೆಷ್ಟು ಗೊತ್ತಾ?
ಯೋಜನೆಗೆ ಅಗತ್ಯವಿರುವ ದಾಖಲೆಗಳು: ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಆಧಾರ್ ಕಾರ್ಡ್, ವಿಳಾಸ ಪುರಾವೆ, ಗುರುತಿನ ಚೀಟಿ, ಜಾತಿ ಪ್ರಮಾಣಪತ್ರ, ಪಾಸ್‌ಪೋರ್ಟ್ ಗಾತ್ರದ ಫೋಟೋ, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಪಾಸ್‌ಬುಕ್ ಹೊಂದಿರಬೇಕು.
ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?: ಮೊದಲನೆಯದಾಗಿ pmvishwakarma.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ. ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು. ನೀವು ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿಯನ್ನು ಪಡೆಯುತ್ತೀರಿ. ಆ ರಸೀದಿಯನ್ನು ನಿಮ್ಮೊಂದಿಗೆ ಇರಿಸಿಕೊಳ್ಳಿ. ನಂತರ ಕೇಂದ್ರವು ಕೆಲವೇ ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುತ್ತದೆ. ಇದರಿಂದ ನೀವು ಹೊಲಿಗೆ ಯಂತ್ರವನ್ನು ಖರೀದಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ. ಹೀಗಾಗಿ ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ