ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಈಗ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹ ಅಭಿಯಾನ‌ ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಹಣ ಸಂಗ್ರಹ ಅಭಿಯಾನ‌ ಆರಂಭಿಸಬೇಕೆಂದು ನಿಶ್ಚಯಿಸಲಾಗಿದೆ. 2021ರ ಜನವರಿ 15ರಿಂದ ಫೆಬ್ರವರಿ 27ರವರೆಗೆ ದೇಶಾದ್ಯಂತ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹ ಅಭಿಯಾನ‌ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.


ಈ ಹಣ ಸಂಗ್ರಹ ಅಭಿಯಾನವು ದೇಶಾದ್ಯಂತ ಸುಮಾರು 4 ಲಕ್ಷ ಗ್ರಾಮಗಳನ್ನು ತಲುಪುವ ಗುರಿ ಹೊಂದಿದೆ.‌ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌  ಮನವಿಯ ಮೇರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀರಾಮ ಮಂದಿರಕ್ಕೆ (Ram Mandir) ಸಂಬಂಧಿಸಿದ ಇತರ ಹಿಂದೂ ಸಂಘಟನೆಗಳು ಹಣ ಸಂಗ್ರಹಿಸಲಿವೆ.


ನಕಲಿ ಚೆಕ್‌ನಿಂದ ಹಣ ವಿತ್ ಡ್ರಾ: ಎಸ್‌ಬಿಐನಿಂದ 6 ಲಕ್ಷ ರೂ. ವಾಪಸ್ ಕೇಳಿದ ರಾಮ್ ಮಂದಿರ್ ಟ್ರಸ್ಟ್


ದೇಶದ 4 ಲಕ್ಷ ಗ್ರಾಮಗಳಲ್ಲಿ 4 ಲಕ್ಷ ಜನರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.


ಅಯೋಧ್ಯೆಯಲ್ಲಿ ರಾಮ್ ಮಂದಿರ ನಿರ್ಮಾಣ 36-40 ತಿಂಗಳಲ್ಲಿ ಪೂರ್ಣಗೊಳ್ಳಲಿದೆ-ಟ್ರಸ್ಟ್


2020ರ ಆಗಸ್ಟ್ 5 ರಂದು ಅಭಿಜೀತ್ ಮುಹೂರ್ತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.