ಹಂಪಿ: ಜಿ-20 ಶೃಂಗಸಭೆ ಅಂಗವಾಗಿ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ, ಜುಲೈ 9 ರಿಂದ 12 ವರೆಗೆ 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಜರುಗಲಿದೆ. ದೇಶದ ಜವಳಿ ಕ್ಷೇತ್ರದ ವೈವಿದ್ಯತೆ ಬಿಂಬಿಸುವ ಹಾಗೂ ಜಾಗತಿಕವಾಗಿ ಸಾಂಸ್ಕೃತಿಕ ಜವಳಿ ಉದ್ದಿಮೆಯ ಬೆಳವಣಿಗೆಗೆ ಇಂಬು ಕೊಡುವ ನಿಟ್ಟಿನಲ್ಲಿ, ಹಂಪಿ ಎದುರು ಬಸವಣ್ಣ ಮಂಪಟದ ಆವರಣದಲ್ಲಿ ಜವಳಿ ವಸ್ತುಪ್ರದರ್ಶನಕ್ಕೆ ಸೋಮವಾರ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ ಮೋಹನ್ ಹೇಳಿದರು.


COMMERCIAL BREAK
SCROLL TO CONTINUE READING

ತೋರಣಗಲ್ ಪಟ್ಟಣದ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಚರ್ಚೆಗೆ ಸಂಬAಧಿಸಿದAತೆ ಭಾನುವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.


ಇದನ್ನೂ ಓದಿ: ʼಯೇ ಸಾವು ಆಗಿಲ್ಲ ಮಾರ್ರೆ ಪ್ರದೀಪ್; ಬಜೆಟ್‌ ಮಂಡನೆ ವೇಳೆ ಸ್ವೀಕರ್‌, ಶಾಸಕನಿಗೆ ಪಾಠ.. ವಿಡಿಯೋ ವೈರಲ್‌ ..‌ !


ದೇಶಿ ಸಾಂಸ್ಕೃತಿಕ ಕಲೆಗಳ ಜಾಗತಿಕ ಅನಾವರಣಕ್ಕೆ ಜಿ-20 ವೇದಿಕೆಯಾಗಲಿದೆ. ಈ ಹಿಂದೆ ಒರಿಸ್ಸಾದ ಖಜುರಾಹೋ ಹಾಗೂ ಭುವನೇಶ್ವರದಲ್ಲಿ ಜರುಗಿದ ಜಿ-20 1 ಮತ್ತು 2ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗಳು ಯಶಸ್ವಿಯಾಗಿವೆ. ಇದರಲ್ಲಿ ಜಿ-20 ಸದಸ್ಯ ರಾಷ್ಟ್ರಗಳ 45 ಅತ್ಯುನ್ನತ ಪ್ರತಿನಿಧಿಗಳು ಭಾಗವಹಿಸಿದ್ದರು. ಇದರ ಜೊತೆಗೆ ಹಲವಾರು ವೆಬಿನಾರ್‌ಗಳನ್ನು ಸಹ ಆಯೋಜಿಸಲಾಗಿತ್ತು.


ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪು ಪ್ರಮುಖ ನಾಲ್ಕು ಉದ್ದೇಶಗಳನ್ನು ಹೊಂದಿದೆ. ಮೊದಲನೆಯದಾಗಿ ಸದಸ್ಯ ರಾಷ್ಟ್ರಗಳ ಸಾಂಸ್ಕೃತಿಕ ಅಸ್ಮಿತೆಯನ್ನು ರಕ್ಷಿಸಿ, ಪುನರ್‌ಸ್ಥಾಪಿಸುವುದಾಗಿದೆ. 1970ರ ಯುನಿಸ್ಕೋ ಓಡಂಬಡಿಕೆಯAತೆ ಎಲ್ಲಾ ರಾಷ್ಟ್ರಗಳು ಪರಸ್ಪರ ಸಹಕಾರದಿಂದ, ವಸಾಹತು ಸಮಯ ಅಥವಾ ಇನ್ನಿತರ ಮಾರ್ಗಗಳಿಂದ ಪಡೆಯಲಾದ ಸಾಂಸ್ಕೃತಿಕ ಮಹತ್ವವುಳ್ಳ ಕಲಾಕೃತಿಗಳನ್ನು ಹಿಂದಿರುಗಿಸಬೇಕು. ಭಾರತವು ಸಹ ಇದಕ್ಕೆ ಬದ್ದವಾಗಿದ್ದು, ಈಗಾಗಲೇ ಭಾರತವು ಅಮೇರಿಕಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಅಮೇರಿಕಾವು 150 ಹೆಚ್ಚು ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಲಿದೆ.


ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್


ಗಿನ್ನಿಸ್ ದಾಖಲೆಯ ಲಂಬಾಣಿ ಕುಸೂತಿ ಕಲೆ


ಹಂಪಿಯ ಎದುರು ಬಸವಣ್ಣ ಮಂಟಪದ ಬಳಿ ಜವಳಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಜು.10ರಂದು ವಸ್ತುಪ್ರದರ್ಶನ ಉದ್ಘಾಟನೆ ನಡೆಯಲಿದೆ. ಸಂಡೂರಿನ ಕಲಾಕೇಂದ್ರದ 450ಕ್ಕೂ ಹೆಚ್ಚು ಜನ ಲಂಬಾಣಿ ಮಹಿಳೆಯರು 1300 ವೈವಿಧ್ಯಮಯ ಕಸೂತಿಗಳನ್ನು ಸಿದ್ದಪಡಿಸಿದ್ದು, ಇದು ವಿಶ್ವ ಗಿನ್ನಿಸ್ ದಾಖಲೆಗೆ ಸೇರಲಿದೆ. ಇದರ ಪ್ರದರ್ಶನವೂ ಇಲ್ಲಿರುತ್ತದೆ. ಜೊತೆಗೆ ಇತರೆ ಕರಕಶುಲ ಹಾಗೂ ಜವಳಿ ಕಸೂತಿ ಕಲೆಗಾರರು ಪಾಲ್ಗೊಳ್ಳುವರು. ಈ ಮೂಲಕ ಜಾಗತಿಕವಾಗಿ ಸಾಂಪ್ರದಾಯಿಕ ಲಂಬಾಣಿ ಕಸೂತಿಗೆ ಮನ್ನಣೆ ದೊರಕಿಸಿ, ಅಂತರಾಷ್ಟ್ರೀಯ ಮಾರುಕಟ್ಟೆ ಸೌಲಭ್ಯ ದೊರಕಿಸುವ ಜೊತೆಗೆ ಸಾಂಪ್ರದಾಯಿಕ ಬದುಕಿನ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಿಲ್ಲಿ ಪಾಂಡೆ ತಿಳಿಸಿದರು.


ಗೋಷ್ಠಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಮಹಾ ನಿರ್ದೇಶಕ ಕೆ.ಕೆ.ಬಸಾ ಹಾಗೂ ಕೇಂದ್ರ ವಾರ್ತಾ ವಿಭಾಗದ(ಪಿಐಬಿ) ಸಹಾಯಕ ಮಹಾ ನಿರ್ದೇಶಕಿ ನಾನು ಭಾಸಿನ್ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.


 


--------