Naxal Encounter: 38 ಲಕ್ಷ ಬಹುಮಾನ ಘೋಷಿಸಲ್ಪಟ್ಟ ಮೂವರು ನಕ್ಸಲೀಯರ ಎನ್ಕೌಂಟರ್, ಸಿ60 ತಂಡಕ್ಕೆ ಸಿಕ್ಕ ದೊಡ್ಡ ಯಶಸ್ಸು

Maharashtra Encounter: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆಸಲಾದ ಎನ್‌ಕೌಂಟರ್‌ನಲ್ಲಿ 38 ಲಕ್ಷ ಬಹುಮಾನ ಹೊಂದಿದ್ದ 3 ನಕ್ಸಲೀಯರನ್ನು ಹತ್ಯೆಗೈಯಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸ್ ತಂಡದ ಮೇಲೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದು, ನಂತರ ಪ್ರಾಣ ರಕ್ಷಣೆಗಾಗಿ ಪೊಲೀಸರು ನಡೆಸಿದ ಫೈರಿಂಗ್ ನಲ್ಲಿ ನಕ್ಸಲೀಯರು ಸಾವನ್ನಪ್ಪಿದ್ದಾರೆ.  

Written by - Nitin Tabib | Last Updated : May 1, 2023, 11:41 AM IST
  • ಮನೆ ರಾಜಾರಾಂ ಮತ್ತು ಪೆರಿಮಿಲಿ ಸಶಸ್ತ್ರ ಠಾಣೆ ನಡುವಿನ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಪೆರಿಮಿಲಿ ಮತ್ತು ಅಹೇರಿ ದಳದ ಸದಸ್ಯರು ಮೊಕ್ಕಾಂ ಹೂಡಿದ್ದಾರೆ
  • ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ ಎಂದು ಗಡ್ಚಿರೋಲಿ ಎಸ್ಪಿ ನೀಲೋತ್ಪಲ್ ತಿಳಿಸಿದ್ದಾರೆ.
  • ಈ ಇನ್‌ಪುಟ್ ಆಧಾರದ ಮೇಲೆ ಕ್ರಮ ಕೈಗೊಳ್ಳಲು, ಸಿ-60 ಪೊಲೀಸ ಫೋರ್ಸ್ ನ ಎರಡು ತುಕಡಿಗಳನ್ನು ಕಾಡಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Naxal Encounter: 38 ಲಕ್ಷ ಬಹುಮಾನ ಘೋಷಿಸಲ್ಪಟ್ಟ ಮೂವರು ನಕ್ಸಲೀಯರ ಎನ್ಕೌಂಟರ್, ಸಿ60 ತಂಡಕ್ಕೆ ಸಿಕ್ಕ ದೊಡ್ಡ ಯಶಸ್ಸು title=
ಗಡ್ಚಿರೋಲಿ ಎನ್ಕೌಂಟರ್

Gadchiroli Encounter: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 38 ಲಕ್ಷ ಬಹುಮಾನ ಹೊಂದಿದ್ದ 3 ನಕ್ಸಲೀಯರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ. ನಕ್ಸಲೀಯರನ್ನು ಹತ್ಯೆಗೈಯುವಲ್ಲಿ ಮಹಾರಾಷ್ಟ್ರ ಪೊಲೀಸರ ಸಿ60 ಪಡೆ ಯಶಸ್ವಿಯಾಗಿದೆ. ಅಹೇರಿ ತಹಸಿಲ್‌ನ ಮನ್ನೆ ರಾಜಾರಾಂ ಪ್ರದೇಶದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಗಡ್ಚಿರೋಲಿ ಡಿಐಜಿ ಸಂದೀಪ್ ಪಾಟೀಲ್ ಹೇಳಿದ್ದಾರೆ. ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಎನ್ ಕೌಂಟರ್ ನಡೆದಿದೆ. ಹತ್ಯೆಗೀಡಾದ ನಕ್ಸಲೀಯರ ಮೇಲೆ 38 ಲಕ್ಷ ರೂಪಾಯಿ ಬಹುಮಾನ ಇತ್ತು. ಪೊಲೀಸರು ನಕ್ಸಲೀಯರ ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

C60 ತಂಡಕ್ಕೆ ಸಿಕ್ಕ ದೊಡ್ಡ ಯಶಸ್ಸು
ಗಡ್ಚಿರೋಲಿಯಲ್ಲಿ 3 ನಕ್ಸಲೀಯರನ್ನು ಹತ್ಯೆಗೈದ ಘಟನೆಯ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಗಡ್ಚಿರೋಲಿಯಲ್ಲಿ ಮಹಾರಾಷ್ಟ್ರ ಪೊಲೀಸರ ಸಿ 60 ಪಡೆ ಮೂವರು ನಕ್ಸಲೀಯರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ ಮತ್ತು ಅವರ ಈ ಯಶಸ್ವಿ ಕಾರ್ಯಾಚರಣೆಗೆ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ನಿರಂತರವಾಗಿ ನಮ್ಮ C60 ಸೈನಿಕರು ಮತ್ತು ಪಡೆಗಳು ಮಹಾನ್ ಶೌರ್ಯವನ್ನು ಮೆರೆಯುತ್ತಿವೆ. ಇಂದು ನಾನು ಗಡ್ಚಿರೋಲಿಗೆ ಭೇಟಿ ನೀಡುತ್ತಿದ್ದು, ಅಲ್ಲಿನ ದಕ್ಷಿಣ ಹಾಗೂ ಉತ್ತರದ ಭಾಗಗಳಿಗೆ ನಾವು ಭೇಟಿ ನೀಡಿ ಅಲ್ಲಿಯೇ ಇರುತ್ತೇನೆ. ಗಡ್ಚಿರೌಲಿ ಅಭಿವೃದ್ಧಿಗೆ ಅಲ್ಲಿ ಕಾನೂನು ವ್ಯವಸ್ಥೆ ಜಾರಿ ತುಂಬಾ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-Gas Leak Incident: ಲುಧಿಯಾನಾದಲ್ಲಿ ಗ್ಯಾಸ್ ಸೋರಿಕೆಯಿಂದ ದುರ್ಘಟನೆ, 9 ಸಾವು 10 ಜನರಿಗೆ ಗಾಯ

ನಕ್ಸಲೀಯರ ಎನ್‌ಕೌಂಟರ್ ನಡೆದಿದ್ದು ಹೇಗೆ?
ಮನೆ ರಾಜಾರಾಂ ಮತ್ತು ಪೆರಿಮಿಲಿ ಸಶಸ್ತ್ರ ಠಾಣೆ ನಡುವಿನ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಪೆರಿಮಿಲಿ ಮತ್ತು ಅಹೇರಿ ದಳದ ಸದಸ್ಯರು ಮೊಕ್ಕಾಂ ಹೂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ ಎಂದು ಗಡ್ಚಿರೋಲಿ ಎಸ್ಪಿ ನೀಲೋತ್ಪಲ್ ತಿಳಿಸಿದ್ದಾರೆ. ಈ ಇನ್‌ಪುಟ್ ಆಧಾರದ ಮೇಲೆ ಕ್ರಮ ಕೈಗೊಳ್ಳಲು, ಸಿ-60 ಪೊಲೀಸ ಫೋರ್ಸ್ ನ ಎರಡು ತುಕಡಿಗಳನ್ನು ಕಾಡಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-New Rule: ಹೆಡ್ ಫೋನ್ ಇಲ್ಲದೆ ವಿಡಿಯೋ ನೋಡಿದ್ರೆ ರೂ.5000 ದಂಡ! ಈ ವಾರದಿಂದ ಹೊಸ ನಿಯಮ ಜಾರಿ

ಪ್ರತಿದಾಳಿ ನಡೆಸಿದ ಪೊಲೀಸ್ ತಂಡ
ಶೋಧ ಕಾರ್ಯಾಚರಣೆ ವೇಳೆ ನಕ್ಸಲೀಯರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ. ಅವರ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಶಸ್ತ್ರಾಸ್ತ್ರಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮೃತರಲ್ಲಿ ಒಬ್ಬನನ್ನು ಪೆರಿಮಿಲಿ ದಳದ ಕಮಾಂಡರ್ ಬಿಟ್ಲು ಮಾದವಿ ಎಂದು ಗುರುತಿಸಲಾಗಿದೆ. ಇನ್ನು ಇಬ್ಬರನ್ನು ಪೆರಿಮಿಲಿ ದಳದ ವಾಸು ಮತ್ತು ಆಹೇರಿ ದಳದ ಶ್ರೀಕಾಂತ್ ಎಂದು ಗುರುತಿಸಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News