ಛತ್ತೀಸ್ಗಢ: ಏಷ್ಯಾದ ಅತಿದೊಡ್ಡ ಉಕ್ಕು ಸ್ಥಾವರವಾದ ಬಿಲಾಯ್ ಸ್ಟೀಲ್ ಪ್ಲಾಂಟ್ನಲ್ಲಿ ಇಂದು ಮಧ್ಯಾಹ್ನ ಗ್ಯಾಸ್ ಪೈಪ್ಲೈನ್ ಸ್ಫೋಟವಾಗಿ 9 ಜನ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಛತ್ತೀಸ್ಗಢದ ರಾಜಧಾನಿ ರಾಜಪುರದಿಂದ 30 ಕಿ.ಮೀ. ದೂರದಲ್ಲಿರುವ ಬಿಲಾಯ್ ನಗರದ ಬಳಿಯ ಪೈಪ್ಲೈನ್ನಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲು:
ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಅವಘಡದಲ್ಲಿ ಗಾಯಗೊಂಡ ಎಲ್ಲರನ್ನೂ ಸೆಕ್ಟರ್ 9 ನ ಜವಾಹರಲಾಲ್ ನೆಹರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
Chhattisgarh: Visuals from outside a hospital in Bhilai; 6 people have died and 14 injured in a gas pipeline blast in Bhilai Steel Plant. pic.twitter.com/aQGFNr3LIg
— ANI (@ANI) October 9, 2018
ಬೆಳಿಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಾಯಾಳುಗಳ ಸಂಖ್ಯೆ ಇದುವರೆಗೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಬಿಲಾಯ್ ಪಬ್ಲಿಕ್ ರಿಲೇಶನ್ಸ್ ಡಿಪಾರ್ಟ್ಮೆಂಟ್ ಅಧಿಕಾರಿಗಳ ಪ್ರಕಾರ, ಇನ್ನೂ ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು ಪ್ಲಾಂಟ್ ಒಳಗೆ ಸಿಲುಕಿರುವ ನೌಕರರನ್ನು ರಕ್ಷಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.