ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್

2021ರ ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಹುಝಾಫಾ ಅಹ್ಮದಿ ಅವರ ವಿವರವಾದ ಸಲ್ಲಿಕೆ ಮತ್ತು ವಾದಗಳನ್ನು ಆಲಿಸಿದ ನಂತರ ಕೋರ್ಟ್ ತನ್ನ ಆದೇಶಗಳನ್ನು ಕಾಯ್ದಿರಿಸಿತ್ತು.

Written by - ZH Kannada Desk | Last Updated : Oct 22, 2021, 10:30 AM IST
  • ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್
  • ಆರೋಪಿ ವಿರುದ್ಧ ‘ಕೋಕಾ’ದಡಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು
  • 2017ರ ಸೆ.5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ(Gauri Lankesh murder case)ಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA)’ಯಡಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

2017ರಲ್ಲಿ ನಡೆದಿದ್ದ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ 2021ರ ಸೆ.8ರಂದು ಹಿಂದಕ್ಕೆ ಪಡೆಯಲಾಗಿದ್ದ ಕೋಕಾ ಆರೋಪಗಳನ್ನು ಸುಪ್ರೀಂಕೋರ್ಟ್(Supreme Court) ಮರುಸ್ಥಾಪಿಸಿದೆ. ಈ ಬಗೆಗಿನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು, ಹೈಕೋರ್ಟ್ ಆದೇಶ ಪ್ರಶ್ನಿಸಿ 2021ರ ಏಪ್ರಿಲ್ 22 ರಂದು ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: School Children : ಈಗ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಸುರಕ್ಷಿತ : ಪೋಷಕರಿಗೆ ಮಕ್ಕಳ ತಜ್ಞರಿಂದ ಸಲಹೆ 

ದಕ್ಷಿಣ ಕನ್ನಡ ನಿವಾಸಿಯಾದ ಆರೋಪಿ ಮೋಹನ್ ನಾಯಕ್(Mohan Naik) ವಿರುದ್ಧ ‘ಕೋಕಾ’ದಡಿ ದಾಖಲಿಸಲಾದ ಆರೋಪವನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು ಪೂರ್ಣಗೊಳಿಸಿದೆ. ಆರೋಪಿ ನಾಯಕ್ ವಿರುದ್ಧ ಕೋಕಾ ಕಾಯ್ದೆಯಡಿ ತನಿಖೆ ನಡೆಸುವುದಕ್ಕಾಗಿ ಅನುಮತಿ ನೀಡುವಂತೆ ಕೋರಿ ಪೊಲೀಸ್ ಇಲಾಖೆ ಸಲ್ಲಿಸದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ 2018ರ ಆಗಸ್ಟ್ 14ರಂದು ರದ್ದುಗೊಳಿಸಿ ತೀರ್ಪು ನೀಡಿತ್ತು.

2021ರ ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್(Supreme Court ) ಹಿರಿಯ ವಕೀಲರಾದ ಹುಝಾಫಾ ಅಹ್ಮದಿ ಅವರ ವಿವರವಾದ ಸಲ್ಲಿಕೆ ಮತ್ತು ವಾದಗಳನ್ನು ಆಲಿಸಿದ ನಂತರ ಕೋರ್ಟ್ ತನ್ನ ಆದೇಶಗಳನ್ನು ಕಾಯ್ದಿರಿಸಿತ್ತು. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

More Stories

Trending News