General Elections 2024: ಪ್ರತಿಪಕ್ಷಗಳ ಒಕ್ಕೂಟ ರಚನೆಗೆ ಮುಂದುವರೆದ ಕಸರತ್ತು, ದೆಹಲಿಯಲ್ಲಿ ಖರ್ಗೆ ನಿವಾಸಕ್ಕೆ ತಲುಪಿದ ನಿತೀಶ್
General Elections 2024: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಿತೀಶ್ ಕುಮಾರ್ ಕಳೆದ ಕೆಲವು ತಿಂಗಳುಗಳಿಂದ ವಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.
General Elections 2024: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆ ನಿತೀಶ್ ದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾಗಿರುವ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಜೆಡಿಯು ಅಧ್ಯಕ್ಷ ಲಲನ್ ಸಿಂಗ್ ಮತ್ತು ಬಿಹಾರ ಸರ್ಕಾರದ ಸಚಿವ ಸಂಜಯ್ ಝಾ ಕೂಡ ಉಪಸ್ಥಿತರಿದ್ದಾರೆ.
ಮಾಹಿತಿ ಪ್ರಕಾರ ತೇಜಸ್ವಿ ಯಾದವ್ ಅವರು ಅನಾರೋಗ್ಯದ ಕಾರಣ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮೊನ್ನೆ ಶನಿವಾರ ಕರ್ನಾಟಕದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 18 ವಿರೋಧ ಪಕ್ಷಗಳ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪ್ರತಿಪಕ್ಷಗಳ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನ ನಡೆಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಜೆಡಿಯು ಅಧ್ಯಕ್ಷ ಲಲನ್ ಸಿಂಗ್, ಬಿಹಾರದ ಉಪಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ-Manipur Clash: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಎರಡು ಸಮುದಾಯಗಳ ಮಧ್ಯೆ ಭಾರಿ ಘರ್ಷಣೆ
ಪ್ರತಿಪಕ್ಷಗಳು ಒಂದಾಗಲು ಯತ್ನ
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಿತೀಶ್ ಕುಮಾರ್ ಕಳೆದ ಕೆಲವು ತಿಂಗಳುಗಳಿಂದ ವಿಪಕ್ಷಗಳ ಒಕ್ಕೂಟ ರಚನೆಗೆ ಪ್ರಯತ್ನ ನಡೆಸುತ್ತಿದ್ದಾರೆ. ಈ ಪ್ರಯತ್ನದಡಿಯಲ್ಲಿ ಖರ್ಗೆ ಅವರು ಹಲವು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ, ನಿತೀಶ್ ಕುಮಾರ್ ಅವರು ಅನೇಕ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿ ಸಾಮಾನ್ಯ ವೇದಿಕೆಗೆ ಬರುವಂತೆ ಸಲಹೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪ್ರತಿಪಕ್ಷಗಳ ಪ್ರಮುಖ ನಾಯಕರ ಸಭೆ ನಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ-Jaish e Mohammed ಉಗ್ರ ಸಂಘಟನೆಗೆ ಸೇರಿದ ಕುಖ್ಯಾತ ಭಯೋತ್ಪಾದಕನ ಬಂಧನ, ದೊಡ್ಡ ದಾಳಿಯ ಸಂಚು ವಿಫಲ
ಭಾನುವಾರ ಸಿಎಂ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು
ನಿತೀಶ್ ಕುಮಾರ್ ಅವರು ಕಳೆದ ತಿಂಗಳು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆಗ ತೇಜಸ್ವಿ ಯಾದವ್ ಕೂಡ ಅವರ ಜೊತೆಗಿದ್ದರು. ಇದಲ್ಲದೆ, ಹಿಂದಿನ ದಿನ ಅಂದರೆ ಭಾನುವಾರ (ಮೇ 21) ನಿತೀಶ್ ಕುಮಾರ್ ಅವರನ್ನು ದೆಹಲಿಯಲ್ಲಿರುವ ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸರ್ಕಾರವನ್ನು ಕೆಲಸ ಮಾಡದಂತೆ ತಡೆಯುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ನಿತೀಶ್ ಕುಮಾರ್ ಈ ಸಂದರ್ಭದಲ್ಲಿ ಹೇಳಿದ್ದರು. ಹೀಗಾಗಿ ದೇಶದ ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಅವರು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ