ನವದೆಹಲಿ: ಮಾಜಿ ರಕ್ಷಣಾ ಸಚಿವ ಜಾರ್ಜ್​ ಫರ್ನಾಂಡಿಸ್​ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಭಾರತ ಕಂಡ ಅತ್ಯುತ್ತಮ, ಪ್ರಾಮಾಣಿಕ, ನೇರ ಮತ್ತು ನಿಷ್ಠೂರ ನುಡಿಯ ರಾಜಕಾರಣಿ ಜಾರ್ಜ್ ಫರ್ನಾಂಡಿಸ್ ಇಂತಹ ವ್ಯಕ್ತಿಯನ್ನು ಕಳೆದುಕೊಂಡು ದುಃಖವಾಗಿದೆ ಎಂದು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ದಿಟ್ಟ ಹಾಗೂ ದೂರದೃಷ್ಟಿವುಳ್ಳ ನಾಯಕರಾಗಿದ್ದ ಜಾರ್ಜ್ ಫರ್ನಾಂಡಿಸ್ ಬಡವರ ಹಕ್ಕಿಗಾಗಿ ಧ್ವನಿಯೆತ್ತುತ್ತಿದ್ದವರಲ್ಲಿ ಪ್ರಮುಖರಾಗಿದ್ದರು. ಇಂತಹ ವ್ಯಕ್ತಿಯ ಅಗಲಿಕೆ ದುಃಖವನ್ನು ತಂದಿದೆ ಎಂದು ಪ್ರಧಾನಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.



ಅವರ ದೀರ್ಘಾವಧಿಯ ಸಾರ್ವಜನಿಕ ಜೀವನದಲ್ಲಿ, ಜಾರ್ಜ್ ಸಾಹಬ್ ಅವರ ರಾಜಕೀಯ ಸಿದ್ಧಾಂತದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ. ಅವರ ಸರಳತೆ ಮತ್ತು ನಮ್ರತೆ ಎಲ್ಲರಿಗೂ ಮಾದರಿಯಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅವರನ್ನು ಪ್ರೀತಿಸುವ ಲಕ್ಷಾಂತರ ಜನರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.