Body found in fridge: ನೈಋತ್ಯ ದೆಹಲಿಯ ನಜಾಫ್‌ ಗಢದ ಮಿತ್ರಾನ್ ಗ್ರಾಮದ ಹೊರವಲಯದಲ್ಲಿ ಡೇಟಿಂಗ್ ಮಾಡುತ್ತಿದ್ದ ಯುವತಿಯನ್ನು ಕೊಂದು ಆಕೆಯ ಶವವನ್ನು ಡಾಭಾವೊಂದರ ಫ್ರಿಡ್ಜ್‌ನಲ್ಲಿ ಸಂಗ್ರಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಮೂಲಗಳ ಪ್ರಕಾರ, ಕಾಶ್ಮೀರಿ ಗೇಟ್ ಐಎಸ್‌ಬಿಟಿ ಬಳಿ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಘಟನೆಯ ಆರೋಪಿ ಸಾಹಿಲ್ ಗೆಹ್ಲೋಟ್ (26) ಎಂದು ಗುರುತಿಸಲಾಗಿದೆ. ಈತ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ತನ್ನ ಢಾಬಾದ ಫ್ರಿಡ್ಜ್‌ನಲ್ಲಿ ಶವವನ್ನು ಬಚ್ಚಿಟ್ಟಿದ್ದ ಎನ್ನಲಾಗಿದೆ. ಮಂಗಳವಾರ ಪೊಲೀಸರು ಕಾರ್ಯಾಚರಣೆ ನಡೆಸಿ ಢಾಬಾದ ಫ್ರಿಡ್ಜ್‌ನಲ್ಲಿದ್ದ ಶವವನ್ನು ಹೊರತೆಗೆದಿದ್ದಾರೆ. ಈ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.


ಇದನ್ನೂ ಓದಿ: BIG BREAKING: ದೆಹಲಿಯ BBC ಕಚೇರಿ ಮೇಲೆ ಐಟಿ ದಾಳಿ.!


ಸಾಹಿಲ್ ಮತ್ತು ಕೊಲೆಯಾದ ಯುವತಿ ಪರಸ್ಪರ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಆದರೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣ ಕೋಪಗೊಂಡ ಆರೋಪಿ ಸಾಹಿಲ್, ಆಕೆಯನ್ನಯ ಕೊಂದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಈ ಪ್ರಕರಣವು ಶ್ರದ್ಧಾ ವಾಕರ್ ಕೊಲೆ ಪ್ರಕರಣವನ್ನು ಹೋಲುತ್ತದೆ. ಅಲ್ಲಿ 27 ವರ್ಷದ ಯುವತಿಯನ್ನು ಆಕೆಯ ಲೈವ್-ಇನ್ ಪಾರ್ಟ್ನರ್ ಆಫ್ತಾಬ್ ಅಮೀನ್ ಪೂನಾವಾಲಾ ಕತ್ತು ಹಿಸುಕಿ ಕೊಂದಿದ್ದ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 300-ಲೀಟರ್ ರೆಫ್ರಿಜರೇಟರ್‌ನಲ್ಲಿ ಶೇಖರಿಸಿಟ್ಟು ಅದರ ಭಾಗಗಳನ್ನು ದೆಹಲಿ ಅರಣ್ಯದಲ್ಲಿ ಎಸೆಯುತ್ತಿದ್ದ.


ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ದೆಹಲಿ ಪೊಲೀಸರು 6,636 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣ ದಾಖಲಾದ 75 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.


ಕಳೆದ ವರ್ಷ ನವೆಂಬರ್ 12 ರಂದು ದೆಹಲಿ ಪೊಲೀಸರು ಅಫ್ತಾಬ್‌ನನ್ನು ಬಂಧಿಸಿದ್ದು, ಆ ನಂತರ ಶ್ರದ್ಧಾ ವಾಲ್ಕರ್ ಅವರ ಹತ್ಯೆಯ ಬಗ್ಗೆ ಗಂಭೀರವಾದ ವಿವರಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದವು. ಶ್ರದ್ಧಾ ವಾಕರ್ ಅವರ ಅಸ್ಥಿಗಳ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಕೆಯ ದೇಹವನ್ನು ಗರಗಸದಂತಹ ವಸ್ತುವಿನಿಂದ 35 ತುಂಡುಗಳಾಗಿ ಕತ್ತರಿಸಲಾಗಿದೆ ಎಂದು ತಿಳಿದುಬಂದಿತ್ತು.


ಇದನ್ನೂ ಓದಿ: Viral Video : ಇದ್ದಕ್ಕಿದ್ದಂತೆ ವಾಹನದ ಮೇಲೆ ಆನೆ ದಾಳಿ.! ಬಡಪಾಯಿ ಚಾಲಕನ ಪಾಡು ನೋಡಿ..


ದಕ್ಷಿಣ ದೆಹಲಿಯ ಕಾಡುಗಳಿಂದ 13 ಕೊಳೆತ ದೇಹದ ಭಾಗಗಳನ್ನು, ಹೆಚ್ಚಾಗಿ ಮೂಳೆಗಳ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ದೆಹಲಿಗೆ ತೆರಳಿದಾಗಿನಿಂದ ಈ ಜೋಡಿಗಳ ನಡುವೆ ಭಿನ್ನಾಭಿಪ್ರಾಯ, ಜಗಳಗಳು ನಡೆಯುತ್ತಲೇ ಇತ್ತು ಎಂದು ಹೇಳಲಾಗಿದೆ. ಇವೆಲ್ಲದರ ಮಧ್ಯೆ ಆಕೆಯನ್ನು ಕೊಂದಿರುವುದಾಗಿ ಅಫ್ತಾಬ್ ತನ್ನ ತಪ್ಪೊಪ್ಪಿಗೆಯಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.