ನವದೆಹಲಿ: ದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. 


COMMERCIAL BREAK
SCROLL TO CONTINUE READING

ಎನ್‌ ಸಿ ಆರ್‌ ಬಿ ಅಂಕಿ ಅಂಶಗಳ ಪ್ರಕಾರ, "ಇಂದು ದೇಶದಲ್ಲಿ ಪ್ರತಿ ಆರು ಗಂಟೆಗಳಿಗೆ ಒಂದರಂತೆ  ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದುವರೆಗೂ ದೇಶದಲ್ಲಿ 38,000 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಅತ್ಯಧಿಕ ಅತ್ಯಾಚಾರ ಪ್ರಕರಣಗಳ ಪಟ್ಟಿಯಲ್ಲಿ ಮಧ್ಯ ಪ್ರದೇಶ ಅಗ್ರ ಸ್ಥಾನದ್ದು, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ; ಈ ದೇಶದಲ್ಲಿ ಏನು ನಡೆಯುತ್ತಿದೆ?" ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. 


ಬಿಹಾರದ ಮುಜಾಫರ್ ಪುರದ ಆಶ್ರಯ ಗೃಹಗಳಲ್ಲಿ ಅಸಹಾಯಕ ಹೆಣ್ಣು ಮಕ್ಕಳ ಮೇಲೆ ನಡೆದಿರುವ ಅತ್ಯಾಚಾರಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌, ಆ ಆಶ್ರಯ ಮನೆಗಳಿಗೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರೂ ಯಾರೂ ಯಾವುದೇ ಮಾಹಿತಿ ನೀಡಿಲ್ಲ. ಈ ರೀತಿಯ ಆಶ್ರಯ ಮನೆಗಳು ತಲೆ ಎತ್ತುವುದಕ್ಕೆ ಬಿಹಾರ ಸರ್ಕಾರ ಅವಕಾಶ ಮಾಡಿಕೊಟ್ಟಿರುವುದಾದರೂ ಹೇಗೆ? ಮುಜಾಫ‌ರಪುರ ಆಶ್ರಯ ಗೃಹಗಳಲ್ಲಿ ಅತ್ಯಾಚಾರ ನಡೆಸಿರುವ ಅಪರಾಧಿಗಳನ್ನು ಶಿಕ್ಷಿಸದೆ ಬಿಹಾರ ಸರ್ಕಾರ ಏನು ಮಾಡುತ್ತಿದೆ ಎಂದು ಸುಪ್ರೀಂ ಪ್ರಶ್ನಿಸಿದೆ.