ಅಮೃತಸರ: ಕಾಲೇಜು ಅವರಣದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ನಗರದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿದೆ.


COMMERCIAL BREAK
SCROLL TO CONTINUE READING

ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರು ಇನ್ಮುಂದೆ ಸ್ಕರ್ಟ್, ಟಿ-ಶರ್ಟ್, ಜೀನ್ಸ್ ಧರಿಸದಂತೆ ಮತ್ತು ವಿದ್ಯಾರ್ಥಿಗಳು ಜೀನ್ಸ್'ಗೆ ಬದಲಾಗಿ ಫಾರ್ಮಲ್ಸ್ ಧರಿಸುವಂತೆ ಕಾಲೇಜು ಆಡಳಿತ ಮಂಡಳಿ ಸೂಚನೆ ನೀಡಿದೆ. ಈ ಸಂಬಂಧ ಕಾಲೇಜು ಪ್ರಾಂಶುಪಾಲರಾದ ಸುಜಾತ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ಈ ನೂತನ ವಸ್ತ್ರ ಸಂಹಿತೆ ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. 


ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ ಎಂಬ ವಿಚಾರ ತಿಳಿದ ಕೂಡಲೇ ಕೆಲವು ವಿದ್ಯಾರ್ಥಿನಿಯರು ಪ್ರಾಂಶುಪಾಲರನ್ನು ಭೇಟಿಯಾಗಿ ಆದೇಶ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಈ ಮನವಿಯನ್ನು ಪ್ರಿನ್ಸಿಪಾಲ್ ತಿರಸ್ಕರಿಸಿದ್ದಾರೆ.