Goa Assembly polls: ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಂಜಿಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.

Last Updated : Jan 21, 2022, 07:23 PM IST
  • ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಂಜಿಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.
Goa Assembly polls: ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ title=
Photo Courtesy: ANI

ನವದೆಹಲಿ: ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಂಜಿಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.

ಇದನ್ನೂ ಓದಿ: ಯಾರೋ ಮಿಸ್ ಗೈಡ್ ಮಾಡಿದ್ದಾರೆ, ಯಾವ ಗಲಾಟೆನೂ ಇಲ್ಲ, ಏನು ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

'ಮನೋಹರ್ ಪರಿಕ್ಕರ್ ಅವರು ಪಣಜಿಯಿಂದ ಎರಡು ದಶಕಗಳಿಂದ ಸ್ಪರ್ಧಿಸಿದ್ದರು. ಅವರು ಪಣಜಿಯೊಂದಿಗೆ ಬಾಂಧವ್ಯವನ್ನು ಬೆಳೆಸಿಕೊಂಡರು ಮತ್ತು ನಾನು ಕೂಡ ಆ ಬಾಂಧವ್ಯವನ್ನು ಹೊಂದಿದ್ದೇನೆ. ನಾನು ಮೌಲ್ಯಗಳಿಗಾಗಿ ಹೋರಾಡುತ್ತಿದ್ದೇನೆ" ಎಂದು ಉತ್ಪಲ್ ಪರಿಕ್ಕರ್ ಶುಕ್ರವಾರದಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಗುರುವಾರದಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಉತ್ಪಲ್ ಪರಿಕ್ಕರ್ ಅವರನ್ನು ಎಎಪಿಗೆ ಸೇರಲು ಆಹ್ವಾನ ನೀಡಿದ್ದರು.

ಇದನ್ನೂ ಓದಿ : Gold price today : ಚಿನ್ನಾಭರಣ ಪ್ರಿಯರ ಗಮನಕ್ಕೆ : ಇಂದು ಮತ್ತೆ ಚಿನ್ನ - ಬೆಳ್ಳಿ ಬೆಲೆ ಏರಿಕೆ

ಈ ಕುರಿತು ಮಾತನಾಡಿದ ಉತ್ಪಲ್ ಪರಿಕ್ಕರ್, 'ನಾನು ಸ್ಪರ್ಧಿಸಬಹುದೆಂದು ನನ್ನ ಪಕ್ಷಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದೆ, ಆದರೆ ನಾನು ಅಭ್ಯರ್ಥಿಯಾಗಲಿಲ್ಲ, ಹಾಗಾಗಿ ನನ್ನ ಎದುರಿಗೆ ಎರಡು ಆಯ್ಕೆಗಳು ಇದ್ದವು, ಒಂದು ಬಿಜೆಪಿಯಿಂದ ಸ್ಪರ್ಧಿಸುವುದು, ಇನ್ನೊಂದು ಸ್ವತಂತ್ರವಾಗಿ ಸ್ಪರ್ಧಿಸುವುದು.ಹಾಗಾಗಿ ಈಗ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ" ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News