ಪಣಜಿ: ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ ಅಧಿಕೃತ ಪ್ರಕಟಣೆಯೊಂದು ಹೇಳಿದೆ. 


COMMERCIAL BREAK
SCROLL TO CONTINUE READING

ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿರುವ 63 ವರ್ಷದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು, ಮತ್ತೆ ಶನಿವಾರ ರಾತ್ರಿ ಗೋವಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎಂಡೋಸ್ಕೋಪಿ ಮಾಡಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಪರಿಕ್ಕರ್ ಅವರನ್ನು 48 ಗಂಟೆಗಳ ಕಾಲ ವೈದ್ಯರು ನಿಗಾ ವಹಿಸಲಿದ್ದಾರೆ  ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.


ಮನೋಹರ್ ಪರಿಕ್ಕರ್ ಅವರಿಗೆ ಕಳೆದ ವರ್ಷ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಅಮೆರಿಕಾಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದಿದ್ದರು. ಅಲ್ಲದೆ ದೆಹಲಿಯ ಏಮ್ಸ ಆಸ್ಪತ್ರೆಗೂ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಬಜೆಟ್ ಅಧಿವೇಶದಲ್ಲಿ ಭಾಗವಹಿಸಿ ಬಜೆಟ್ ಮಂಡನೆ ಸಹ ಮಾಡಿದ್ದರು. ಅಲ್ಲದೆ, ತಮ್ಮ ಖಾಸಗಿ ನಿವಾಸದಲ್ಲೇ ಹೆಚ್ಚಿನ ಸಮಯ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದ ಪರಿಕ್ಕರ್, ಅಲ್ಲಿಂದಲೇ ಸರ್ಕಾರದ ಆಡಳಿತವನ್ನು ನಿರ್ವಹಿಸುತ್ತಿದ್ದರು.