ಪಣಜಿ: ಅಕ್ಟೋಬರ್ 2 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಸದಂತೆ ಗೋವಾ ಸರ್ಕಾರ ಆದೇಶಿಸಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಸೆಪ್ಟೆಂಬರ್ 25ರಂದು ಸುತ್ತೋಲೆ  ಹೊರಡಿಸಲಾಗಿದ್ದು, "ಸರ್ಕಾರಿ ಕಚೇರಿಗಳಲ್ಲಿ, ಕ್ಯಾಂಟೀನ್‌ಗಳು, ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಅಕ್ಟೋಬರ್ 2, 2019 ರಿಂದ ಏಕ-ಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲಿಗಳು, ಕನ್ನಡಕ, ಫಲಕಗಳು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಲು ಗೋವಾ ಸರ್ಕಾರ ನಿರ್ಧರಿಸಿದೆ" ಎಂದು ಸಾಮಾನ್ಯ ಆಡಳಿತ ವಿಭಾಗದ ಕಾರ್ಯದರ್ಶಿ ಶ್ರೀಪಾಡ್ ಅರ್ಲೆಕರ್ ತಿಳಿಸಿದ್ದಾರೆ.


ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಸೂಚನೆ ಮೇರೆಗೆ ಈ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿರುವ ಅರ್ಲೇಕರ್, ಕರಾವಳಿ ರಾಜ್ಯದಲ್ಲಿ ಪರಿಸರ ಸ್ನೇಹಿ ಮತ್ತು ಮರು ಬಳಕೆ ವಸ್ತುಗಳನ್ನು ಉತ್ತೇಜಿಸಲು ಸರ್ಕಾರ ಬಯಸಿದೆ ಎಂದು ಹೇಳಿದರು.


ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಕ್ಯಾರಿ ಬ್ಯಾಗುಗಳನ್ನು ನಿಷೇಧಿಸುವ ಮಸೂದೆಯನ್ನು ಕಳೆದ ತಿಂಗಳು ಗೋವಾ ವಿಧಾನಸಭೆಯು ಅಂಗೀಕರಿಸಿದೆ. ಅದರನ್ವಯ ಸರ್ಕಾರದ ಈ ನಿಯಮ ಉಲ್ಲಂಘಿಸುವವರಿಗೆ 2,500 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. 


ಪ್ರಧಾನಿ ನರೇಂದ್ರ ಮೋದಿ ಅವರು ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಕರೆ ನೀಡಿದ ಬೆನ್ನಲ್ಲೇ ಗೋವಾ ಸರ್ಕಾರ ಈ ಮಸೂದೆಯನ್ನು ಜಾರಿಗೆ ತಂದಿದೆ.