ನವದೆಹಲಿ: ಮುಂಬರುವ 2022 ರ ಗೋವಾ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಕಾಂಗ್ರೆಸ್ ಮತ್ತು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಶನಿವಾರದಂದು ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸಿವೆ.


COMMERCIAL BREAK
SCROLL TO CONTINUE READING

ಪಣಜಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, ಕರಾವಳಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜಿಎಫ್‌ಪಿ ಮೈತ್ರಿಯನ್ನು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕರ್ನಾಟಕದ ಮೇಲಿನ ದಾಳಿಗೆ ಸಮ-ಎಚ್ ಡಿ.ಕುಮಾರಸ್ವಾಮಿ


"(ಜಿಎಫ್‌ಪಿ ಮುಖ್ಯಸ್ಥ) ವಿಜಯ್ ಸರ್ದೇಸಾಯಿ ಅವರು ದೆಹಲಿಯಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ ನಂತರ, ಗೋವಾದ ಕೋಮುವಾದಿ ಮತ್ತು ಭ್ರಷ್ಟ ಬಿಜೆಪಿ ಸರ್ಕಾರವನ್ನು ಸೋಲಿಸಲು ಮತ್ತು ಗೋವಾದಲ್ಲಿ ಬದಲಾವಣೆಯನ್ನು ತರಲು ನಮ್ಮೊಂದಿಗೆ ಕೆಲಸ ಮಾಡಲು ಬಯಸುತ್ತೇವೆ ಎಂದು ಹೇಳಿದರು" ಎಂದು ರಾವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.


ಇದಲ್ಲದೆ, ಕಾಂಗ್ರೆಸ್ ಮತ್ತು ಜಿಎಫ್‌ಪಿ ಪರಸ್ಪರ ನಂಬಿಕೆ ಹೊಂದಿವೆ."ರಾಜಕೀಯದಲ್ಲಿ, ಯಾವಾಗಲೂ ಸ್ನೇಹ, ಮೈತ್ರಿಗಳಿಗೆ ಅವಕಾಶವಿರುತ್ತದೆ ಮತ್ತು ನಾವು ಪರಸ್ಪರ ನಂಬಿಕೆ ಮತ್ತು ವಿಶ್ವಾಸವನ್ನು ಹೊಂದಿದ್ದೇವೆ" ಎಂದು ಗುಂಡುರಾವ್ ಹೇಳಿದರು.


ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ


ಕಾಂಗ್ರೆಸ್-ಜಿಎಫ್‌ಪಿ ಮೈತ್ರಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ವಿಶ್ವಾಸವಿದೆ.ನಾವು ಒಟ್ಟಿಗೆ ಚುನಾವಣೆಗೆ ಹೋಗುತ್ತೇವೆ ಮತ್ತು ಈ ಮೈತ್ರಿಯು ಹೆಚ್ಚಿನ ಜನರನ್ನು ಕಾಂಗ್ರೆಸ್ ಸೇರುವತ್ತ ಕೊಂಡೊಯ್ಯುತ್ತದೆ ಎಂದು ನಾನು ನಿರೀಕ್ಷಿಸುತ್ತೇನೆ.ಈ ಚುನಾವಣೆಯಲ್ಲಿ, ರಾಜ್ಯದಲ್ಲಿ ಸ್ಥಿರ ಸರ್ಕಾರವನ್ನು ಬಯಸಿ ಜನರು ಬಿಜೆಪಿಯನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ ಎಂದು ನನಗೆ ಖಾತ್ರಿಯಿದೆ.ಎರಡು ಪಕ್ಷಗಳ ನಡುವಿನ ಸೀಟು ಹಂಚಿಕೆಯ ವಿವರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಗುಂಡುರಾವ್ ಹೇಳಿದರು.


ಜಿಎಫ್‌ಪಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಮತ್ತು ಶಾಸಕ ವಿನೋದ್ ಪಾಲ್ಯೇಕರ್, ಸ್ವತಂತ್ರ ಶಾಸಕ ಪ್ರಸಾದ್ ಗಾಂವ್ಕರ್ ಅವರೊಂದಿಗೆ ನವೆಂಬರ್ 30 ರಂದು ದೆಹಲಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.ಜಿಎಫ್‌ಪಿ ಈ ಹಿಂದೆ ಗೋವಾದಲ್ಲಿ ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರದೊಂದಿಗೆ ಮೈತ್ರಿಯಲ್ಲಿತ್ತು, ಆದಾಗ್ಯೂ, ಪಕ್ಷದ ಅಧ್ಯಕ್ಷ ವಿಜಯ್ ಸರ್ದೇಸಾಯಿ ಸೇರಿದಂತೆ ಎಲ್ಲಾ ಮೂರು ಶಾಸಕರನ್ನು ಸಂಪುಟದಿಂದ ಕೈಬಿಟ್ಟ ನಂತರ ಜುಲೈ 2019 ರಲ್ಲಿ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು.


ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.