Good News: Omicron ಆತಂಕದ ನಡುವೆ ಇಲ್ಲಿದೆ ಒಂದು ಭಾರಿ ನೆಮ್ಮದಿಯ ಸುದ್ದಿ
Omicron Updates - ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶದಲ್ಲಿ ಇತ್ತೀಚೆಗೆ ಕರೋನವೈರಸ್‌ನ (Coronavirus) ಓಮಿಕ್ರಾನ್ ರೂಪಾಂತರಿಯಿಂದ (Omicron Variant) ಸೋಂಕಿಗೆ ಒಳಗಾಗಿದ್ದ 1.5 ವರ್ಷದ ಬಾಲಕಿ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೇ ವೇಳೆ, ಈ ಪ್ರದೇಶದಲ್ಲಿ ಈ ಹೊಸ ರೂಪಾಂತರದಿಂದ ಸೋಂಕಿಗೆ ಒಳಗಾದ 3 ವರ್ಷದ ಬಾಲಕನಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಆತನ ಆರೋಗ್ಯವು ಸಂಪೂರ್ಣವಾಗಿ ಉತ್ತಮವಾಗಿದೆ.
ಪುಣೆ: Baby Girl Recovered From Omicron - ಮಹಾರಾಷ್ಟ್ರದ (Maharashtra)ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶದಲ್ಲಿ ಇತ್ತೀಚೆಗೆ ಕರೋನವೈರಸ್‌ನ (Covid 19) ಓಮಿಕ್ರಾನ್ ರೂಪಾಂತರಿಯಿಂದ ಸೋಂಕಿಗೆ ಒಳಗಾಗಿದ್ದ 1.5 ವರ್ಷದ ಬಾಲಕಿ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೇ ವೇಳೆ, ಈ ಪ್ರದೇಶದಲ್ಲಿ ಈ ಹೊಸ ರೂಪಾಂತರದಿಂದ ಸೋಂಕಿಗೆ ಒಳಗಾದ 3 ವರ್ಷದ ಬಾಲಕನಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ (Good News) ಮತ್ತು ಆತನ ಆರೋಗ್ಯವು ಸಂಪೂರ್ಣವಾಗಿ ಉತ್ತಮವಾಗಿದೆ.
ಏಕಕಾಲಕ್ಕೆ ಪಿಂಪ್ರಿ-ಚಿಂಚವಡ್ ನಲ್ಲಿ ಪ್ರಕರಣಗಳು ವರದಿಯಾಗಿದ್ದವು
ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ (ಪಿಸಿಎಂಸಿ) ಪ್ರದೇಶದ 4 ಹೊಸ ರೋಗಿಗಳಲ್ಲಿ 3 ವರ್ಷದ ಮಗುವೂ ಸೇರಿದೆ. ಇದಲ್ಲದೆ, ಇತರ ರೋಗಿಗಳಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಶಾಮೀಲಾಗಿದ್ದಾರೆ. ಈ ಎಲ್ಲಾ ಜನರು ನೈಜೀರಿಯಾದಿಂದ ಭಾರತಕ್ಕೆ ಆಗಮಿಸಿದ ಭಾರತೀಯ ಮೂಲದ ಓರ್ವ ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರಿಯರ ಸಂಪರ್ಕಕ್ಕೆ ಬಂದಿದ್ದರು.
ಇದನ್ನೂ ಓದಿ-Omicron : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಓಮಿಕ್ರಾನ್ ಎರಡನೇ ಪ್ರಕರಣ ಪತ್ತೆ..!
4 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ
ಈ ಹಿಂದೆ ಒಮಿಕ್ರಾನ್ ಸೋಂಕಿತ 6 ಜನರಲ್ಲಿ 4 ಮಂದಿ ಸೋಂಕಿನಿಂದ ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇವರಲ್ಲಿ 1.5 ವರ್ಷದ ಬಾಲಕಿಯೂ ಸೇರಿದ್ದಾಳೆ.
ಇದನ್ನೂ ಓದಿ-ಮುಂಬೈನಲ್ಲಿ ಬೃಹತ್ ಕೂಟಗಳ ಮೇಲೆ ಎರಡು ದಿನಗಳ ನಿಷೇಧ ಹೇರಿಕೆ
ಮಗುವಿನ ವಿಶೇಷ ಕಾಳಜಿ
ಈ ಕುರಿತು ಮಾಹಿತಿ ನೀಡಿರುವ ಪಿಸಿಎಂಸಿ ಆರೋಗ್ಯಾಧಿಕಾರಿ ಡಾ.ಲಕ್ಷ್ಮಣ ಗೋಫಾನೆ 4 ಹೊಸ ರೋಗಿಗಳಲ್ಲಿ 3 ವರ್ಷದ ಬಾಲಕನಿಗೆ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ, ಮಕ್ಕಳ ಆರೈಕೆ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದನ್ನೂ ಓದಿ-ಮಹಾರಾಷ್ಟ್ರದಲ್ಲಿ 7 ಹೊಸ ಓಮಿಕ್ರಾನ್ ಪ್ರಕರಣಗಳು ವರದಿ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ