ಉತ್ತರ ಕರ್ನಾಟಕದ ಶಬರಿಮಲೆ ಸ್ವಾಮಿ ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ..!
ಉತ್ತರ ಕರ್ನಾಟಕದ ಭಾಗದಿಂದ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆಯುವುದು ಇನ್ಮುಂದೆ ಸುಲಭ ಎಂದೇ ಹೇಳಬಹುದು.
ಹುಬ್ಬಳ್ಳಿ: ಉತ್ತರ ಕರ್ನಾಟಕದ ಭಾಗದಿಂದ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆಯುವುದು ಇನ್ಮುಂದೆ ಸುಲಭ ಎಂದೇ ಹೇಳಬಹುದು.
ಹೌದು, ಇದೆ ಮೊದಲ ಬಾರಿಗೆ ಹುಬ್ಬಳ್ಳಿಯ ನೈಋತ್ಯ ವಲಯ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರ ಕೊಟ್ಟಾಯಂ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಬಿಡಲು ನಿರ್ಧರಿಸಿದೆ. ಆ ಮೂಲಕ ಬಹು ದಿನಗಳ ಬೇಡಿಕೆಯಾಗಿರುವ ಲಕ್ಷಾಂತರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯ ಈಡೇರಿಸಿದೆ.
ಇದನ್ನೂ ಓದಿ: Pramod Muthalik: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಗೆ ಜೀವ ಬೆದರಿಕೆ..!
ಕೊಟ್ಟಾಯಂ ರೈಲು ನಿಲ್ದಾಣ ಸ್ವಾಮಿ ಅಯ್ಯಪ್ಪ ದೇವಸ್ಥಾನಕ್ಕೆ ಹತ್ತಿರ ಇರುವುದರಿಂದಾಗಿ ಈಗ ಹುಬ್ಬಳ್ಳಿ ಮಾರ್ಗವಾಗಿ ವಿಶೇಷವಾದ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಜಯಪುರ ಕೊಟ್ಟಾಯಂ ರೈಲು ಬಿಡಲು ರೈಲ್ವೆ ವಲಯ ತಿರ್ಮಾನಿಸಿದೆ.Viral Video: ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ ಚಿರತೆ! ಭಯಾನಕ ವಿಡಿಯೋ ಹೇಗಿದೆ ನೋಡಿ
ವಿಶ್ವದ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ತೀರ್ಥಯಾತ್ರೆಯಲ್ಲಿ ಒಂದಾಗಿರುವ ಶಬರಿಮಲೆಗೆ ಇದುವರೆಗೆ ಸೂಕ್ತ ಸಾರಿಗೆ ವ್ಯವಸ್ತೆ ಇಲ್ಲದ ಕಾರಣ ಹೆಚ್ಚಿನ ಹಣ ನೀಡಿ ಖಾಸಗಿ ವಾಹನಗಳ ಮೂಲಕ ಪ್ರಯಾಣಿಸಬೇಕಾಗಿತ್ತು. ಹೀಗಾಗಿ ಈ ಪರಿಪಾಟಲು ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು.ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ.
07385 ನಂಬರಿನ ರೈಲು ಸೋಮವಾರ ರಾತ್ರಿ 11 ಗಂಟೆಗೆ ವಿಜಯಪುರ ಬಿಡಲಿದ್ದು, ಬುಧವಾರ ಬೆಳಗಿನ ಜಾವ 2 ಗಂಟೆಗೆ ಕೊಟ್ಟಾಯಂ ತಲುಪಲಿದೆ.ವಿಜಯಪುರ, ಬಸವನ ಬಾಗೇವಾಡಿ,ಬಾಗಲಕೋಟೆ, ಬಾದಾಮಿ, ಹೊಳೆಆಲೂರು, ಆಲಮಟ್ಟಿ, ಗದಗ, ಹುಬ್ಬಳ್ಳಿ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಇರೋಡ್, ತಿರುಪ್ಪೂರು, ಕೊಯಂಬತ್ತೂರು, ಪಾಲಕ್ಕಾಡ್, ತ್ರಿಸ್ಸೂರು ಹಾಗೂ ಎರ್ನಾಕುಲಂ ಮಾರ್ಗವಾಗಿ ಈ ರೈಲು ಕೊಟ್ಟಾಯಂ ತಲುಪಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.