Sabarimala pilgrims: ಶಬರಿಮಲೆ ಯಾತ್ರಾರ್ಥಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ವಿಮಾನಗಳ ಕ್ಯಾಬಿನ್ ಬ್ಯಾಗ್ನಲ್ಲಿ ʼಇರುಮುಡಿʼ ಸಾಗಿಸಲು ಅಸ್ತು ಎಂದು ಎಂದಿದೆ. ಹೌದು, ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್ನಲ್ಲಿ ʼಇರುಮುಡಿʼಯನ್ನು ಸಾಗಿಸಬಹುದು ಅಂತಾ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡಿರುವ ಅವರು, ನವೆಂಬರ್ ಮಧ್ಯದಿಂದ ಜನವರಿಯ ಕೊನೆಯವರೆಗೆ ಶಬರಿಮಲೆಗೆ ಯಾತ್ರಾರ್ಥಿಗಳು ತೆರಳುತ್ತಾರೆ. 2025ರ ಜನವರಿ 20ರವರೆಗೆ ಯತಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್ನಲ್ಲಿ ತೆಂಗಿನಕಾಯಿಯನ್ನು ತೆಗೆದುಕೊಂಡು ಪ್ರಯಾಣಿಸಬಹುದು. ಈ ಸೀಮಿತ ಅವಧಿಯಲ್ಲಿ ಮಾತ್ರ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ ಅಂತಾ ತಿಳಿಸಿದ್ದಾರೆ.
In a move to facilitate the ease of travel for Sabarimala pilgrims, we have issued a special exemption allowing the carrying of coconuts in 'Irumudi' as cabin baggage during the Mandalam-Makaravilakku pilgrimage period. This order will be in effect until January 20, 2025, with… pic.twitter.com/OZcmSMhXa4
— Ram Mohan Naidu Kinjarapu (@RamMNK) October 26, 2024
ಇದನ್ನೂ ಓದಿ: ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸೈಬರ್ ಕ್ರೈಂ ಬಗ್ಗೆ ಮಾತು
ಸದ್ಯದ ನಿಯಮಗಳ ಪ್ರಕಾರ ವಿಮಾನಗಳ ಕ್ಯಾಬಿನ್ ಬ್ಯಾಗ್ನಲ್ಲಿ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿಯಿಲ್ಲ. ಶಬರಿಮಲೆಗೆ ಹೋಗುವವರಿಗೆ ಯಾತ್ರೆ ಸುಲಭವಾಗಲಿ ಅನ್ನೋ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಅವಧಿಯಲ್ಲಿ ʼಇರುಮುಡಿʼಯಲ್ಲಿ ತೆಂಗಿನಕಾಯಿ ಸಾಗಿಸಲು ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಗೆ ಸಿಹಿಸುದ್ದಿ ನೀಡಿದೆ. ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದ ಕ್ಯಾಬಿನ್ ನಲ್ಲಿ 'ಇರುಮುಡಿ' ಕೊಂಡೊಯ್ಯಲು ಅನುಮತಿ ನೀಡಿದೆ. pic.twitter.com/pjxCqvxgmd
— BJP Karnataka (@BJP4Karnataka) October 27, 2024
ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವ ಎಕ್ಸ್-ರೇ, ಇಟಿಡಿ (ಸ್ಫೋಟಕ ಟ್ರೇಸ್ ಡಿಟೆಕ್ಟರ್) ಮತ್ತು ಭೌತಿಕ ತಪಾಸಣೆ ಹೀಗೆ ಭದ್ರತಾ ತಪಾಸಣೆಗಳ ಬಳಿಕವೇ ಅನುಮತಿ ನೀಡಲಾಗುವುದು. ಒಟ್ಟು 2 ತಿಂಗಳು ಅಂದರೆ ಜನವರಿ ಅಂತ್ಯದವರೆಗೆ ತೀರ್ಥಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವು ತೆರೆದಿರುತ್ತದೆ.
ಇದನ್ನೂ ಓದಿ: ನಾನೇ ಅಭ್ಯರ್ಥಿ ಎಂದು ತಿಳಿದು ಭರತ್ ನನ್ನು ಗೆಲ್ಲಿಸಿ: ಬಸವರಾಜ ಬೊಮ್ಮಾಯಿ
ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ. ಜೊತೆಗೆ ʼಇರುಮುಡಿ ಕೆಟ್ಟುʼ (ತುಪ್ಪ ತುಂಬಿದ ತೆಂಗಿನಕಾಯಿ ಸೇರಿದಂತೆ ಅರ್ಪಣೆಗಳನ್ನು ಹೊಂದಿರುವ ಪವಿತ್ರ ಚೀಲ). ಶಬರಿಮಲೆಗೆ ಯಾತ್ರೆ ಕೈಗೊಳ್ಳುವವರು ʼಕೆಟ್ಟುನಿರಕಲ್ʼ ಆಚರಣೆಯ ಭಾಗವಾಗಿ ʼಇರುಮುಡಿ ಕೆಟ್ಟುʼ ಸಿದ್ಧಪಡಿಸುತ್ತಾರೆ. ಆಚರಣೆ ಸಮಯದಲ್ಲಿ ತೆಂಗಿನಕಾಯಿಯೊಳಗೆ ತುಪ್ಪ ತುಂಬಿಸಲಾಗುತ್ತದೆ. ನಂತರ ಅದನ್ನು ಇತರ ನೈವೇದ್ಯಗಳೊಂದಿಗೆ ಚೀಲದಲ್ಲಿ ಇರಿಸಲಾಗುತ್ತದೆ. ತೀರ್ಥಯಾತ್ರೆಯ ಸಮಯದಲ್ಲಿ ವಿವಿಧ ಪವಿತ್ರ ಸ್ಥಳಗಳಲ್ಲಿ ಒಡೆಯಲು ಹೆಚ್ಚಿನ ತೆಂಗಿನಕಾಯಿಗಳನ್ನು ಇರಿಸಿರಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.