ನವದೆಹಲಿ: ಇಂದು ಸೆಪ್ಟೆಂಬರ್ 5. ದೇಶಾದ್ಯಂತ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗೂಗಲ್ ವಿಶೇಷ ಡೂಡಲ್ ಮೂಲಕ ಅವರಿಗೆ ಗೌರವ ಸಮರ್ಪಿಸಿದೆ.


COMMERCIAL BREAK
SCROLL TO CONTINUE READING

ಶಿಕ್ಷಕನನ್ನು ಆಕ್ಟೋಪಸ್ ಗೆ ಹೋಲಿಸಲಾಗಿದ್ದು, ತರಗತಿಯಲ್ಲಿ ಶಿಕ್ಷಕರಂತೆ ಹಲವಾರು ಕೆಲಸಗಳನ್ನು ಏಕಕಾಲಕ್ಕೆ ನಿರ್ವಹಿಸುತ್ತಿರುವ ಡೂಡಲ್ ಅನ್ನು ಗೂಗಲ್ ಪೋಸ್ಟ್ ಮಾಡಿದೆ. ಅಲ್ಲದೆ, ಗಣಿತದ ಸಮೀಕರಣವನ್ನು ಬಿಡಿಸುತ್ತಿರುವ, ಓದುತ್ತಿರುವ, ವಿದಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ಹಾಗೆಯೇ ನಗುಮುಖದೊಂದಿಗೆ ಸಂಗಿತವನ್ನೂ ಈ ಆಕ್ಟೋಪಸ್ ಹೇಳಿಕೊಡುತ್ತಿದೆ. ಇಲ್ಲಿ ವಿದ್ಯಾರ್ಥಿಗಳಾಗಿ ಮೀನುಗಳನ್ನು ತೋರಿಸಲಾಗಿದೆ.


ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ 5 ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.