ಮೋಟೆರಾ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರು, ಕೇಂದ್ರ ನೀಡಿದ ಸ್ಪಷ್ಟನೆ ಏನು ಗೊತ್ತೇ?
ಮೊಟೆರಾ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಮರು ನಾಮಕರಣ ಮಾಡಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕಾಪ್ರಹಾರ ಗಳು ಎದುರಾದವು.
ನವದೆಹಲಿ: ಮೊಟೆರಾ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಮರು ನಾಮಕರಣ ಮಾಡಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕಾಪ್ರಹಾರ ಗಳು ಎದುರಾದವು.
ಈ ಹಿನ್ನಲೆಯಲ್ಲಿ ಈಗ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಕೇವಲ ಕ್ರಿಕೆಟ್ ಸ್ಟೇಡಿಯಂಗೆ ಮಾತ್ರ ಪ್ರಧಾನಿ ಮೋದಿ (Narendra Modi Stadium) ಹೆಸರನ್ನು ಇಡಲಾಗಿದೆ. ಕ್ರೀಡಾ ಸಂಕೀರ್ಣವನ್ನು ಸರ್ದಾರ್ ಪಟೇಲ್ ಎಂದು ಹೆಸರಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.
Narendra Modi Stadium: ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನಕ್ಕೆ 'ನರೇಂದ್ರ ಮೋದಿ' ಹೆಸರು..!
ಆದರೆ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟೀಕಾಕಾರರ ವಿರುದ್ಧ ವಾಗ್ದಾಳಿ ನಡೆಸಿ."ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನ ಹೆಸರು ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಎನ್‌ಕ್ಲೇವ್. ಸಂಕೀರ್ಣದೊಳಗಿನ ಕ್ರಿಕೆಟ್ ಕ್ರೀಡಾಂಗಣದ ಹೆಸರನ್ನು ಮಾತ್ರ ನರೇಂದ್ರ ಮೋದಿಯವರು ಹೆಸರಿಸಿದ್ದಾರೆ. ವಿಪರ್ಯಾಸವೆಂದರೆ, ಸರ್ದಾರ್ ಪಟೇಲ್ ಅವರ ಮರಣದ ನಂತರವೂ ಅವರನ್ನು ಎಂದಿಗೂ ಗೌರವಿಸದ ಕುಟುಂಬ ಈಗ ಈ ಬಗ್ಗೆ ಮಾತನಾಡುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.